ಮೇ 16 ರಂದು 18 ಮಂದಿ ಸಾಧಕರಿಗೆ ದತ್ತಿನಿಧಿ ಪ್ರಶಸ್ತಿ ಪ್ರದಾನ: ಪ್ರದೀಪ ಕುಮಾರ ಕಲ್ಕೂರ್

ರಾಜ್ಯ ಉಡುಪಿ ಕಾರವಾರ ಕುಂದಾಪುರ ಜಿಲ್ಲಾ ಸುದ್ದಿ ಪುತ್ತೂರು ಮಂಗಳೂರು ಶಿರಸಿ
<

Spread the love

ಮಂಗಳೂರು: ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಗಡಿಪದೇಶ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿ ಪ್ರದಾನ ಹಾಗೂ ಕನ್ನಡ ಸಂಸ್ಕೃತಿ ಉತ್ಸವ ಮೇ 16 ರಂದು ಬೆಳಿಗ್ಗೆ 9 ಗಂಟೆಯಿಂದ ಸುಬ್ಬಯ್ಯಕಟ್ಟೆ ಕುಡಾಲ್ ಮೇರ್ಕಳದ ಕುಡಾಲು ಅನುದಾನಿತ ಕಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಯಲಿದೆ ಎಂದು ಪ್ರದೀಪ ಕುಮಾರ ಕಲ್ಕೂರ್ ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

<

ಈ ಬಾರಿ 18 ಮಂದಿಗೆ ದತ್ತಿನಿಧಿ ಪ್ರಶಸ್ತಿ ಪುರಸ್ಕಾರ ನೀಡಲಾಗುವುದು. ಕಾರ್ಯಕ್ರಮವನ್ನು ಸಚಿವ ಎನ್.ಎಸ್. ಭೋಸರಾಜು ಉದ್ಘಾಟಿಸಲಿದ್ದು, ಮಂಜೇಶ್ವರ ಶಾಸಕ ಎ.ಕೆ.ಎಂ. ಆಶ್ರಫ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.

ವಿಧಾನಸಭೆಯ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ದತ್ತಿನಿಧಿ ಪ್ರಶಸ್ತಿ ಪ್ರದಾನ ಮಾಡಲಿದ್ದು, ಸೋಮಣ್ಣ ಬೇವಿನಮರದ ಗಡಿನಾಡ ಸಾಧಕರನ್ನು ಸನ್ಮಾನಿಸಲಿದ್ದಾರೆ. ಮುಖ್ಯಮಂತ್ರಿ ಅವರ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಪತ್ರಕರ್ತರಿಗೆ ಗುರುತಿನ ಚೀಟಿ ವಿತರಿಸಲಿದ್ದು, ದುಬೈ ಶಾಫಿ ಬಂಡಸಾಲ ಅವರ ಮನದಾಳದಿಂದ ಪುಸ್ತಕವನ್ನು ಬಿಡುಗಡೆಗೊಳಿಸಲಾಗುವುದು. ಕರ್ನಾಟಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಹೀದ್ ಪುಸ್ತಕ ಬಿಡುಗಡೆ ಮಾಡಲಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಕಾಸರಗೋಡು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಾಬು ಅಬ್ರಹಾಂ, ಸದಸ್ಯ ಸೋಮಶೇಖರ್ ಜೆ.ಎಸ್., ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಶಿವಾನಂದ ತಗಡೂರು, ಪ್ರಾರ್ಥನಾ ವರ್ಲ್ಡ್ ಸ್ಕೂಲ್ ಅಧ್ಯಕ್ಷ ಕರ್ಣ ಬೆಳಗೆರೆ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ ಎಂದರು.

ಸ್ವಾಗತ ಸಮಿತಿಯ ಪ್ರಧಾನ ಸಂಚಾಲಕ ಅಶೋಕ ಭಂಡಾರಿ ಕುಡಾಲ್, ಕೆ.ಯು.ಡಬ್ಲ್ಯೂ.ಜೆ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ರಾಧಾಕೃಷ್ಣ ಕೆ. ಉಳಿಯತಡ್ಕ, ಕೆ.ಯು.ಡಬ್ಲ್ಯೂ.ಜೆ ಕಾಸರಗೋಡು ಅಧ್ಯಕ್ಷ ಎ.ಆರ್. ಸುಬ್ಬಯಕಟ್ಟೆ, ಸದಸ್ಯರಾದ ರಾಘವ ಚೇರಾಲ್ ಹಾಗೂ ರವಿ ನಾಯ್ಕಪ್ ಇದ್ದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *