ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ನಿಧನ, ಗಣ್ಯರ ಸಂತಾಪ

ಜಿಲ್ಲಾ ಸುದ್ದಿ ಉಡುಪಿ ಕಾರವಾರ ಕುಂದಾಪುರ ಪುತ್ತೂರು ಮಂಗಳೂರು ರಾಜ್ಯ ಶಿರಸಿ
<

Spread the love

ಚಿವ  ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಹಿರಿಯ ರಾಜಕಾರಣಿ ಡಿ. ಸುಧಾಕರ್ (60) ಅವರು ದೀರ್ಘಕಾಲದ ಅನಾರೋಗ್ಯದಿಂದ ಭಾನುವಾರ ಬೆಳಿಗ್ಗೆ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

<

ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆಗೆ ಸ್ಪಂದಿಸದೇ ನಿಧನರಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ಅಧಿಕೃತವಾಗಿ ತಿಳಿಸಿವೆ.​

ಸಚಿವ ಸುಧಾಕರ್ ಅವರು ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಶಸ್ತ್ರಚಿಕಿತ್ಸೆ ಯಶಸ್ವಿಯಾದಂತೆ ಕಂಡರೂ, ತದನಂತರ ಅವರ ಶ್ವಾಸಕೋಶದಲ್ಲಿ ತೀವ್ರ ಸ್ವರೂಪದ ಸೋಂಕು ಕಾಣಿಸಿಕೊಂಡಿತು. ಇದರಿಂದಾಗಿ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿತ್ತು. ​​ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಣಿಪಾಲ್ ಆಸ್ಪತ್ರೆಯಿಂದ ಎಲೆಕ್ಟ್ರಾನಿಕ್ ಸಿಟಿ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಹಲವು ದಿನಗಳಿಂದ ಐಸಿಯುನಲ್ಲಿಅವರಿಗೆ ತಜ್ಞ ವೈದ್ಯರ ತಂಡ ನಿರಂತರ ಚಿಕಿತ್ಸೆ ನೀಡುತ್ತಿತ್ತು. ಆದರೆ, ಚಿಕಿತ್ಸೆಗೆ ಅವರು ಸ್ಪಂದಿಸದೆ ನಿಧನರಾಗಿದ್ದಾರೆ.

​ಸಚಿವ ಸುಧಾಕರ್ ಅವರ ಅಕಾಲಿಕ ನಿಧನಕ್ಕೆ ರಾಜಕೀಯ ವಲಯದಲ್ಲಿ ತೀವ್ರ ಶೋಕ ವ್ಯಕ್ತವಾಗಿದೆ. ಚಿತ್ರದುರ್ಗ ಜಿಲ್ಲೆಯ ಅಭಿವೃದ್ಧಿಯಲ್ಲಿ ಸಕ್ರಿಯರಾಗಿದ್ದ ಅವರನ್ನು ಕಳೆದುಕೊಂಡ ಜಿಲ್ಲೆಯ ಜನತೆ ಕಂಬನಿ ಮಿಡಿದಿದ್ದಾರೆ. ಮುಖ್ಯಮಂತ್ರಿ, ಸಚಿವರು ಹಾಗೂ ವಿವಿಧ ಪಕ್ಷಗಳ ಮುಖಂಡರು ಸುಧಾಕರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry