ರಾಯಚೂರು: ವಿಷಪೂರಿತ ಸಿ.ಎಚ್ ಪೌಡರ್ ಮಿಶ್ರಿತ ಸೇಂದಿಯನ್ನು ಸಾರ್ವಜನಿಕವಾಗಿ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನೇತಾಜಿ ನಗರ ಠಾಣೆ ಪೊಲೀಸರು ಒಬ್ಬನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಹರಿಜನವಾಡ ನಿವಾಸಿ ತಾಯಪ್ಪ (52) ಬಂಧಿತ ಆರೋಪಿ. ಪೆಟ್ರೋಲಿಂಗ್ ಕರ್ತವ್ಯದಲ್ಲಿದ್ದ ಪೊಲೀಸರಿಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆ, ಠಾಣೆಯ ವ್ಯಾಪ್ತಿಯ ಬೋಳಮಾನದೊಡ್ಡಿ ರಸ್ತೆಯ ಕೃಷ್ಣ ದೇವಸರಾಯ ಕಾಲೋನಿ ಏಗನೂರು ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿ ದಾಳಿ ನಡೆಸಲಾಗಿದೆ.
ನೇತಾಜಿ ನಗರ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 39/2026 ದಾಖಲಿಸಿಕೊಂಡು, ಭಾರತೀಯ ನ್ಯಾಯ ಸಂಹಿತೆ (ಬಿ.ಎನ್.ಎಸ್) ಕಲಂ 123, 275, 286 ಹಾಗೂ ಅಬಕಾರಿ ಕಾಯ್ದೆಯ 32 ಮತ್ತು 34ನೇ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
What do you feel about this post?
0%
Like
0%
Love
0%
Happy
0%
Haha
0%
Sad
0%
