Sports | ಮೇ 9,10 ರಂದು ಸುರತ್ಕಲ್‌ನಲ್ಲಿ ‘ಲೆಜೆಂಡ್ಸ್ ಕ್ರಿಕೆಟ್ ಲೀಗ್’ ಸೀಸನ್-5- ಹಿರಿಯರ ಕ್ರಿಕೆಟ್ ಹಬ್ಬ: ಕಿರಣ್ ಆಚಾರ್ಯ

ಜಿಲ್ಲಾ ಸುದ್ದಿ ಕ್ರೀಡೆ ಮಂಗಳೂರು ರಾಜ್ಯ
<

Spread the love

ಮಂಗಳೂರು: ಸುರತ್ಕಲ್ ಸ್ಪೋರ್ಟ್ಸ್ & ಕಲ್ಬರಲ್ ಕ್ಲಬ್ ಮತ್ತು ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಬರಲ್ ಸೇವಾ ಟ್ರಸ್ಟ್ ಇವುಗಳ ಜಂಟಿ ಆಶ್ರಯದಲ್ಲಿ ರಾಜ್ಯ ಮಟ್ಟದ 45 ವರ್ಷ ಮೇಲ್ಪಟ್ಟ ಆಟಗಾರರ ತಂಡಗಳ ‘ಓವರ್ ಆರ್ಮ್’ ಕ್ರಿಕೆಟ್ ಪಂದ್ಯಕೂಟ ‘ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5’ ಮೇ 9 ಮತ್ತು 10 ರಂದು ಸುರತ್ಕಲ್‌ನ ಗೋವಿಂದದಾಸ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಕಾರ್ಯದರ್ಶಿ ಕಿರಣ್ ಆಚಾರ್ಯ ಅವರು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.

<

ಕಳೆದ ಐದು ವರ್ಷಗಳಿಂದ ಯಶಸ್ವಿಯಾಗಿ ನಡೆಯುತ್ತಾ ಬಂದಿರುವ ಈ ಕ್ರೀಡಾಕೂಟವು ಹಿರಿಯ ಕ್ರಿಕೆಟಿಗರನ್ನು ಒಗ್ಗೂಡಿಸುವ ‘ಹಿರಿಯ ಕ್ರಿಕೆಟ್ ಹಬ್ಬ’ವಾಗಿ ಮೂಡಿಬರಲಿದೆ ಎಂದರು.

ಪಂದ್ಯಕೂಟದಲ್ಲಿ ವಿಜೇತ ತಂಡಗಳಿಗೆ ಭರ್ಜರಿ ನಗದು ಬಹುಮಾನ ಮತ್ತು ಟ್ರೋಫಿಗಳನ್ನು ಘೋಷಿಸಲಾಗಿದೆ. ಪ್ರಥಮ ಬಹುಮಾನ 1,00,005 ರೂ. ನಗದು ಹಾಗೂ ಟ್ರೋಫಿ, ದ್ವಿತೀಯ ಬಹುಮಾನ: 50,005 ರೂ. ನಗದು ಹಾಗೂ ಟ್ರೋಫಿ ಹಾಗೂ ತೃತೀಯ ಮತ್ತು ಚತುರ್ಥ ಬಹುಮಾನ ಆಕರ್ಷಕ ಟ್ರೋಫಿಗಳನ್ನು ನೀಡಲಾಗುವುದು ಎಂದರು.

ಈ ಪಂದ್ಯಕೂಟದಲ್ಲಿ ರಾಜ್ಯದ ವಿವಿಧ ಭಾಗಗಳಿಂದ 45 ವರ್ಷ ಮೇಲ್ಪಟ್ಟ ನುರಿತ ಆಟಗಾರರ ತಂಡಗಳು ಭಾಗವಹಿಸಲಿದ್ದು, ಕ್ರಿಕೆಟ್ ಪ್ರೇಮಿಗಳಿಗೆ ಹಳೆಯ ನೆನಪುಗಳನ್ನು ಮರುಕಳಿಸುವಂತೆ ಮಾಡಲಿದೆ.

ಕ್ರೀಡಾಕೂಟದ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಎಂದು ಕಿರಣ್ ವಿವರಿಸಿದರು.

ಗೌರವಾಧ್ಯಕ್ಷ ಮಹಾಬಲ ಪೂಜಾರಿ ಕಡಂಬೋಡಿ ಹಾಗೂ ಸದಸ್ಯರಾದ ಪೃಥ್ವಿರಾಜ್ ಶೆಟ್ಟಿ ಮಧ್ಯ ಇದ್ದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *