ಮಂಗಳೂರು: ಮುಖ್ಯಮಂತ್ರಿ ಬದಲಾವಣೆ ಕುರಿತ ಎಲ್ಲ ನಿರ್ಧಾರಗಳನ್ನೂ ಪಕ್ಷದ ವರಿಷ್ಠರೇ ಕೈಗೊಳ್ಳುತ್ತಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.
ತಾವು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯೇ ಎಂಬ ಪ್ರಶ್ನೆಗೆ ನೇರ ಉತ್ತರ ನೀಡದೇ, ಯಾವುದೇ ತೀರ್ಮಾನವಾದರೂ ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುತ್ತದೆ. ಇದಕ್ಕೆ ಎಲ್ಲರೂ ಬದ್ಧರಾಗಿದ್ದೇವೆ. ಸರ್ಕಾರಕ್ಕೆ ಮೂರು ವರ್ಷ ಪೂರ್ತಿಯಾದ ಬಳಿಕ ವಿಸ್ತರಣೆ ಮಾಡುವ ಚರ್ಚೆ ನಡೆದಿತ್ತು. ಕೇರಳದಲ್ಲಿ ಸರ್ಕಾರ ರಚನೆಯ ನಂತರ ಪಕ್ಷದ ವರಿಷ್ಠರು ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.
ಮೇ 14 ರಂದು ಖುಷಿ ವಿಚಾರ ಸಿಗಲಿದೆ ಎಂಬ ಮಾಜಿ ಸಂಸದ ಡಿಕೆ ಸುರೇಶ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯಾವುದೇ ದಿನಾಂಕ ನಿಗದಿಪಡಿಸುವ ಅಧಿಕಾರ ಯಾರಿಗೂ ಇಲ್ಲ. ಅಂತಿಮ ನಿರ್ಧಾರವನ್ನು ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಳ್ಳಲಿದೆ ಎಂದರು.
ತಮಿಳುನಾಡಿನಲ್ಲಿ ಕಾಂಗ್ರೆಸ್ ಸಚಿವ ಸ್ಥಾನಕ್ಕಾಗಿ ಭಿಕ್ಷೆ ಬೇಡುತ್ತಿದೆ ಎಂಬ ಬಿಜೆಪಿ ಛಲವಾದಿ ನಾರಾಯಣ ಸ್ವಾಮಿ ಅವರ ಹೇಳಿಕೆಯನ್ನು ತಳ್ಳಿ ಹಾಕಿದ ಅವರು, ಇಂತಹ ಹೇಳಿಕೆಗಳಿಗೆ ಪ್ರತಿಕ್ರಿಯಿಸುವ ಅಗತ್ಯವಿಲ್ಲ. ತಮಿಳುನಾಡಿನ ಟಿವಿಕೆ ಪಕ್ಷದ ಸ್ಥಾಪಕ ವಿಜಯ್ ಅವರು ಜಾತ್ಯತೀತ ಹಾಗೂ ಪ್ರಗತಿಪರ ಚಿಂತನೆ ಹೊಂದಿದವರು ಎಂದರು.
ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಂಡಿದೆ. ಸರ್ವಾಧಿಕಾರಿ ಮತ್ತು ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಟ ಮುಂದುವರೆಯಬೇಕಿದೆ ಎಂದರು.
What do you feel about this post?
Like
Love
Happy
Haha
Sad
