ಉ.ಕ ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ, ಶಾಶ್ವತ ಪರಿಹಾರಕ್ಕೆ ಕ್ರಮ ವಹಿಸಿ: ಸಂಸದ ಕಾಗೇರಿ ಅಧಿಕಾರಿಗಳಿಗೆ ಸೂಚನೆ

ಜಿಲ್ಲಾ ಸುದ್ದಿ ಕಾರವಾರ ಶಿರಸಿ
<

Spread the love

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕುಡಿವ ನೀರಿನ ಅಭಾವ ಮರುಕಳಿಸುವ ನಿಶ್ಚಿತ ಗ್ರಾಮಗಳನ್ನು ಗುರುತಿಸಿ, ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡಲು ಜೆಜೆಎಂ 2 ಹಂತದಲ್ಲಿ ಶಾಶ್ವತ ಪರಿಹಾರ ಒದಗಿಸಲು ಕ್ರಮ ವಹಿಸುವಂತೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸೂಚಿಸಿದರು.

<

ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ, ಜಲ ಜೀವನ ಮಿಷನ್ ಅಡಿ ಮಂಜೂರಾದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಬೇಸಿಗೆ ಅವಧಿಯಲ್ಲಿ ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗುತ್ತಿದ್ದು, ಈಗಾಗಲೇ ಗ್ರಾಮ ಪಂಚಾಯತ, ತಾಲೂಕು ಪಂಚಾಯತ ವತಿಯಿಂದ ಖಾಸಗಿ ಬೋರ್‌ವೆಲ್, ಕೊಳವೆ ಬಾವಿ ಹಾಗೂ ಟ್ಯಾಂಕರ್ ಮೂಲಕ ಕುಡಿವ ನೀರು ಒದಗಿಸಲಾಗುತ್ತಿದೆ. ಜೆಜೆಎಂ ಕಾಮಗಾರಿಗಳ ವಿಳಂಬದ ಕುರಿತು ದೂರುಗಳು ಬರುತ್ತಿದ್ದು, ಜೆಜೆಎಂ ಕಾಮಗಾರಿಗಳ ಕಳಪೆ ಕಾಮಗಾರಿ ಮತ್ತು ಗುಣಮಟ್ಟದಲ್ಲಿ ಲೋಪವಾಗದಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದರು.

ಜೆಜೆಎ ಕಾಮಗಾರಿಗಳು ವಿಳಂಬ ಆಗುತ್ತಿರುವ ಬಗ್ಗೆ ಅಸಮಧಾನ ವ್ಯಕ್ತ ಪಡಿಸಿದ ಅವರು, ಗುತ್ತಿಗೆದಾರರು ಕಾಮಗಾರಿ ಪ್ರಾರಂಭಿಸಲು ವಿನಾಕಾರಣ ವಿಳಂಭ ಮಾಡಿದ್ದಲ್ಲಿ ಅಂತಹ ಗುತ್ತಿಗೆದಾರರಿಗೆ ನೋಟಿಸ್ ನೀಡಿ, ಕಪ್ಪು ಪಟ್ಟಿಗೆ ಸೇರಿಸುವಂತೆ ಸೂಚಿಸಿದ ಅವರು, ಅಗತ್ಯವಿರುವ ಕಡೆ ಆದ್ಯತೆ ಮೇಲೆ ಕುಡಿಯುವ ನೀರಿನ ಸಂಪರ್ಕ ಒದಗಿಸವಂತೆ ಸೂಚಿಸಿದರು.

ಜಿಲ್ಲೆಯಲ್ಲಿ ಜೆಜೆಎಂ ಯೋಜನೆಯಡಿ 965 ಕಾಮಗಾರಿಗಳ ಪೈಕಿ ಪ್ರಥಮ ಹಂತದಲ್ಲಿ 256, 2ನೇ ಹಂತದಲ್ಲಿ 228, 3 ನೇ ಹಂತದಲ್ಲಿ 26 ಹಾಗೂ 4 ಹಂತದಲ್ಲಿ 232 ಕಾಮಗಾರಿ ಮುಕ್ತಯವಾಗಿದೆ. ಪ್ರಥಮ ಹಂತದಲ್ಲಿ ಬಿಟ್ಟು ಹೋದ 250 ಗ್ರಾಮಗಳಿಗೆ ಜೆಜೆಎಂ 2 ಹಂತದಲ್ಲಿ ಮುಂದುವರಿಸಿಕೊAಡು ಹೊಗಲು ಅನುಮತಿ ದೊರೆತ್ತಿದ್ದು, ಜೆಜೆಎಂ, ಬಹುಗ್ರಾಮ ಕುಡಿಯುವ ನೀರು ಮತ್ತು ಅಮೃತ ಯೋಜನೆಯ ಎಲ್ಲಾ ಕಾಮಗಾರಿಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡುವಲ್ಲಿ ಹಾಗೂ ನಿರ್ವಹಣೆಗೆ ಆದ್ಯತೆ ನೀಡಿದ್ದಲ್ಲಿ ಕುಡಿಯುವ ನೀರನ ಸಮಸ್ಯೆ ಬಗೆಹರಿಸಬಹುದಾಗಿದ್ದು, ಅಧಿಕಾರಿಗಳು ತಳ ಮಟ್ಟದಿಂದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ
ಮಾಡಿ, ಜನರಿಗೆ ಯೋಜನೆಯ ಸೌಲಭ್ಯಗಳು ದೊರೆಯುವಂತೆ ಮಾಡಬೇಕು ಎಂದರು.

ಜಿಲ್ಲಾ ಪಂಚಾಯತ ಸಿಇಒ ಡಾ. ದಿಲೀಷ್ ಶಶಿ ಅವರು ಮಾತನಾಡಿ, ಹಳಿಯಾಳ, ಮುಂಡಗೋಡಿನಲ್ಲಿ ಖಾಸಗಿ ಬೋರ್‌ವೇಲ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದ್ದು, 31 ಗ್ರಾಮ ಪಂಚಾಯತನಲ್ಲಿ 68 ಕಡೆ ಹಾಗೂ ಮಂಕಿಯ 16 ವಾರ್ಡನಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ ಎಂದರು.

ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಹೆಚ್ಚುವರಿ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ವಿವಿಧ ಇಲಾಖೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತಿತ್ತರರು ಇದ್ದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *