ಚಿತ್ರದುರ್ಗ: ಅನಾರೋಗ್ಯದಿಂದ ನಿಧನರಾಗಿದ್ದ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ಸೋಮವಾರ ಸರಕಾರಿ ಗೌರವಗಳೊಂದಿಗೆ ನಡೆಯಿತು.

ಸೋಮವಾರ ಸಂಜೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿ ಜೈನ ಮುಕ್ತಿಧಾಮದಲ್ಲಿ ಜೈನ ಸಂಪ್ರದಾಯದಂತೆ ವಿಧಿಳನ್ನು ಪೂರೈಸಲಾಯಿತು. ಸಚಿವ ಡಿ.ಸುಧಾಕರ್ ಪ್ರಾರ್ಥಿವ ಶರೀರಕ್ಕೆ ಅವರ ಪುತ್ರ ಸುಹಾಸ್ ಸುಧಾಕರ್ ಅಗ್ನಿಸ್ಪರ್ಶ ಮಾಡುವ ಮೂಲಕ ಅಂತಿಮ ಸಂಸ್ಕಾರ ನೆರವೇರಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಡಾ.ಜಿ.ಪರಮೇಶ್ವರ್, ಎಚ್.ಕೆ.ಪಾಟೀಲ್, ಕೆ.ಜೆ. ಜಾರ್ಜ್, ಸಂತೋಷ್ ಲಾಡ್ ಸೇರಿದಂತೆ ಹಲವರ ಇದ್ದರು.
What do you feel about this post?
0%
Like
0%
Love
0%
Happy
0%
Haha
0%
Sad
0%
