ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಕೇಂದ್ರ ಸರಕಾರದ ವೈಫಲ್ಯ: ಮಾಜಿ ಎಂಎಲ್ಸಿ ಹರೀಶ್ ಕುಮಾರ್

ಶಿಕ್ಷಣ ಉಡುಪಿ ಕಾರವಾರ ಕುಂದಾಪುರ ಜಿಲ್ಲಾ ಸುದ್ದಿ ಪುತ್ತೂರು ಮಂಗಳೂರು ಮಹಾನಗರ ರಾಜ್ಯ ಶಿರಸಿ
<

Spread the love

ಮಂಗಳೂರು: ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆ ನೀಟ್ ಪರೀಕ್ಷೆ ರದ್ದುಗೊಂಡಿರುವ ಘಟನೆ ದೇಶದ ಶಿಕ್ಷಣ ವ್ಯವಸ್ಥೆಯ ಮೇಲಿನ ನಂಬಿಕೆಗೆ ದೊಡ್ಡ ಹೊಡೆತ ನೀಡಿದ್ದು, ಇದು ಕೇಂದ್ರ ಬಿಜೆಪಿ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ ಆಗಿದೆ ಎಂದು ಮಾಜಿ ಎಂಎಲ್ ಸಿ ಹಾಗೂ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಹರೀಶ್ ಕುಮಾರ್ ಆರೋಪಿಸಿದರು.

<

22.5 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಕನಸುಗಳನ್ನು ಹೊತ್ತು ಅಪಾರ ಪರಿಶ್ರಮದೊಂದಿಗೆ ಪರೀಕ್ಷೆ ಬರೆದಿದ್ದರು. ಆದರೆ, ಪ್ರಶ್ನೆಪತ್ರಿಕೆ ಸೋರಿಕೆಯಂತಹ ಗಂಭೀರ ಹಗರಣದಿಂದ ವಿದ್ಯಾರ್ಥಿಗಳ ಭವಿಷ್ಯವೇ ಅತಂತ್ರ ಸ್ಥಿತಿಗೆ ತಳ್ಳಲ್ಪಟ್ಟಿದ್ದು, ಅವರ ಕನಸು ನುಚ್ಚುನೂರಾಗಿದೆ. ಕೇಂದ್ರ ಸರ್ಕಾರ ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಆಡಳಿತ ವೈಫಲ್ಯದಿಂದ ಲಕ್ಷಾಂತರ ವಿದ್ಯಾರ್ಥಿಗಳು ಮಾನಸಿಕ ಒತ್ತಡ ಮತ್ತು ಅನಿಶ್ಚಿತತೆಯೊಳಗೆ ಸಿಲುಕಿದ್ದಾರೆ ಎಂದರು.

ವಿದ್ಯಾರ್ಥಿಗಳ ಪರಿಶ್ರಮ, ಪೋಷಕರ ತ್ಯಾಗ ಹಾಗೂ ಶಿಕ್ಷಣದ ಪಾವಿತ್ರ್ಯತೆಯನ್ನು ಕಾಪಾಡುವಲ್ಲಿ ಕೇಂದ್ರ ಸರ್ಕಾರ ನಿರ್ಲಕ್ಷ್ಯವಹಿಸಿದೆ. ಇಂತಹ ಗಂಭೀರ ಲೋಪದೋಷಗಳಿಗೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಶ್ರೀ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು. ಪ್ರಶ್ನೆಪತ್ರಿಕೆ ಸೋರಿಕೆಯಂತಹ ಹಗರಣಗಳು ಪದೇ ಪದೇ ನಡೆಯುತ್ತಿದ್ದರೂ, ಕೇಂದ್ರದ ಮೇಲೆ ಒತ್ತಡ ತರುವಲ್ಲಿ ರಾಜ್ಯದ ಬಿಜೆಪಿ ಸಂಸದರು ಹಾಗೂ ಕೇಂದ್ರದ ಸಚಿವರು ವಿಫಲರಾಗಿದ್ದಾರೆ ಎಂದರು.

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುವ ಯಾವುದೇ ವ್ಯವಸ್ಥೆಯನ್ನು ಕಾಂಗ್ರೆಸ್ ಪಕ್ಷ ಸಹಿಸುವುದಿಲ್ಲ. ಪ್ರಶ್ನೆಪತ್ರಿಕೆ ಸೋರಿಕೆ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಈ ಹಗರಣದ ಹಿಂದೆ ಇರುವ ದೋಷಿಗಳನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆ ನೀಡಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಪಾರದರ್ಶಕವಾದ ಪರೀಕ್ಷಾ ವ್ಯವಸ್ಥೆಯೊಂದನ್ನು ರೂಪಿಸಲು ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *