ಭಟ್ಕಳ: ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಯಿಂದ ನೀರು ನಿಲ್ಲುವ ಹಾಗೂ ತಾತ್ಕಾಲಿಕ ಪ್ರವಾಹ ಪರಿಸ್ಥಿತಿ ಉಂಟಾಗುವ ಭಟ್ಕಳ ನಗರದ ವಿವಿಧ ಕಾಮಗಾರಿ ಸ್ಥಳಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹಾಗೂ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರು ಪರಿಶೀಲಿಸಿದರು.
ಬಸ್ತಿಯ ಸೇತುವೆ ಹಾಗೂ ಕೆಳ ಸೇತುವೆ ಕಾಮಗಾರಿ ಶೀಘ್ರವೇ ಪೂರ್ಣಗೊಳಿಸಬೇಕು. ವೆಂಕಟಾಪುರ ಸೇತುವೆಯನ್ನು ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕು. ಭಟ್ಕಳ ವೃತ್ತದಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಗೆ ವೇಗ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಳೆಗಾಲದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ನಿಂತು ವಾಹನ ಸಂಚಾರ ಅಸ್ತವ್ಯಸ್ತ ಆಗುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಅಪಾಯ ಇರುವ ಪ್ರದೇಶಗಳಲ್ಲಿ ಜೆಸಿಬಿ ಮೂಲಕ ಒಳಚರಂಡಿ ಕಾಲುವೆ ನಿರ್ಮಾಣ ಮಾಡಿ ನೀರನ್ನು ಹತ್ತಿರದ ಚರಂಡಿ, ನದಿ ಹಾಗೂ ನೈಸರ್ಗಿಕ ಜಲಮಾರ್ಗಗಳಿಗೆ ಹರಿಸುವ ವ್ಯವಸ್ಥೆ ಮಾಡುವಂತೆ ತಿಳಿಸಿದರು.
ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ, ಹೆಚ್ಚುವರಿ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶಿವಕುಮಾರ್, ಎಸಿ ಜೆ. ಮಹೇಶ್, ಡಿವೈಎಸ್ಪಿ ಗಿರೀಶ್ ಸೇರಿದಂತೆ ಹಲವು ಅಧಿಕಾರಿಗಳು ಇದ್ದರು.
What do you feel about this post?
Like
Love
Happy
Haha
Sad
