ಬೆಂಗಳೂರು: ರಾಜ್ಯ ಸರಕಾರವು ನಾಲ್ಕು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಹುದ್ದೆಯ ನಿರೀಕ್ಷೆಯಲ್ಲಿದ್ದ ಹಿರಿಯ ಐಎಎಸ್ ಅಧಿಕಾರಿ ಹರ್ಷ ಗುಪ್ತ ಅವರನ್ನು ರಾಜ್ಯ ಮೇಲ್ಮನವಿ ಪ್ರಾಧಿಕಾರದ ಮುಖ್ಯಸ್ಥರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲಾಧಿಕಾರಿ ನಾಗರಾಜ ಎನ್.ಎಂ. ಅವರನ್ನು ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿ ಒಂಬುಡ್ಸ್ ಮನ್, ಕಲಬುರಗಿ ಜಿಲ್ಲಾ ಪಂಚಾಯತಿ ಸಿಇಒ ಭನ್ವರ್ ಸಿಂಗ್ ಮೀನಾ ಅವರನ್ನು ಚಿಕ್ಕಮಗಳೂರು ಜಿಲ್ಲಾಧಿಕಾರಿ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ನಿರ್ದೇಶಕ ರಾಹುಲ್ ಶರಣಪ್ಪ ಸಂಕನೂರ್ ಅವರನ್ನು ಕಲಬುರಗಿ ಜಿಲ್ಲಾ ಪಂಚಾಯತಿ ಸಿಇಒ ಆಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
What do you feel about this post?
0%
Like
0%
Love
0%
Happy
0%
Haha
0%
Sad
0%
