ಮಂಗಳೂರು: ಮಾತಾ ಅಮೃತಾನಂದಮಯಿ ಅವರು ಸಮಾಜಕ್ಕೆ ಧಾರ್ಮಿಕ ಮಾರ್ಗದರ್ಶನ ಮಾತ್ರವಲ್ಲದೆ ಸಂಸ್ಕೃತಿ, ಶಿಕ್ಷಣ ಮತ್ತು ಜನಪರ ಕಲ್ಯಾಣ ಕಾರ್ಯಕ್ರಮಗಳ ಮೂಲಕ ಸಲ್ಲಿಸುತ್ತಿರುವ ಸೇವೆ ಅತ್ಯುತ್ತಮ, ಮಾದರಿ ಆಗಿದೆ ಎಂದು ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಹೇಳಿದರು.
ಮೇ 28 ಹಾಗೂ 29 ರಂದು ಅಮ್ಮನವರ ಮಂಗಳೂರು ಭೇಟಿಯ ಸಂದರ್ಭದಲ್ಲಿ ಸಾರ್ವಜನಿಕರ ಉಪಯೋಗಕ್ಕಾಗಿ ಬೋಳೂರಿನಲ್ಲಿ ನಿರ್ಮಿಸಲಾದ 10 ಸ್ನಾನಗೃಹ ಮತ್ತು ಶೌಚಾಲಯಗಳನ್ನು ಉದ್ಘಾಟಿಸಿ ಅವರು ಮಾತಾಡಿದರು.
ಮಂಗಳೂರಿನ ಅಮ್ಮನವರ ಆಶ್ರಮಕ್ಕೆ ಹಾಗೂ ದೇವಸ್ಥಾನಕ್ಕೆ ಮತ್ತು ಆಶ್ರಮದ ಸೇವಾ ಚಟುವಟಿಕೆಗಳ ಸಂದರ್ಭದಲ್ಲಿ ಭಕ್ತರು ಹಾಗೂ ಸಾರ್ವಜನಿಕರು ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಆದರೆ, ಹಿಂದುಳಿದ ಈ ಪ್ರದೇಶದಲ್ಲಿ ಸೂಕ್ತ ಶೌಚಾಲಯ ವ್ಯವಸ್ಥೆ ಇಲ್ಲ. ಇದನ್ನು ಮನಗಂಡು ಸಾರ್ವಜನಿಕರ ಒತ್ತಾಯದ ಮೇರೆಗೆ ಜನರ ಉಪಯೋಗಕ್ಕಾಗಿ ಶೌಚಾಲಯ ಮತ್ತು ಸ್ನಾನಗೃಹ ನಿರ್ಮಾಣ ಮಾಡಲಾಗಿದೆ ಎಂದರು.
ಸೇವಾ ಸಮಿತಿ ಅಧ್ಯಕ್ಷ ಸುರೇಶ್ ಅಮೀನ್ ಶಾಸಕರಿಗೆ ಗೌರವಾರ್ಪಣೆ ಮಾಡಿದರು. ಗುತ್ತಿಗೆದಾರ ಅಜಯ್ ಮತ್ತು ಉಸ್ತುವಾರಿ ಪ್ರಸನ್ನ ಅವರನ್ನು ಶಾಸಕರು ಸನ್ಮಾನಿಸಿದರು.
ಸೇವಾ ಸಮಿತಿಯ ಗೌರವಾಧ್ಯಕ್ಷ ಡಾ. ವಸಂತಕುಮಾರ ಪೆರ್ಲ, ಕೋಶಾಧಿಕಾರಿ ಸಿ ಎ ರಾಮನಾಥ್ ನಾಯಕ್,ಮುಂಬೈ ಭಕ್ತಿ ಸಂಪದದ ಬಾಲಕೃಷ್ಣ ಕುಂದರ್, ಶಿವರಾಮ್ ಏನೆಕಲ್, ವಕೀಲರಾದ ಪುಷ್ಪಲತಾ ಗಟ್ಟಿ, ಮಾಜಿ ಮೇಯರ್ ಗಣೇಶ್ ಹೊಸಬೆಟ್ಟು, ಡಾ. ಸುಚಿತ್ರಾ ರಾವ್, ಸೇವಾ ಸಮಿತಿಯ ಪದಾಧಿಕಾರಿಗಳಾದ ವಾಮನ್ ಮೈಂದನ್, ಗಣೇಶ್ ಕೆ, ಅಮೃತ ವಿದ್ಯಾಲಯಂ ಪ್ರಾಂಶುಪಾಲೆ ಮಧುಲಿಖಾ ರಾವ್, ಉಪ ಪ್ರಾಂಶುಪಾಲೆ ರೇಖಾ ಕಾಮತ್ , ಶಿಕ್ಷಕರು, ಸಿಬ್ಬಂದಿವರ್ಗ ಹಾಗೂ ಅಮ್ಮನ ಭಕ್ತರು ಭಾಗವಹಿಸಿದ್ದರು. ವೈದ್ಯಕೀಯ ಪ್ರಕೋಷ್ಠದ ಡಾ. ದೇವದಾಸ ಪುತ್ರನ್ ನಿರೂಪಿಸಿದರು.
What do you feel about this post?
Like
Love
Happy
Haha
Sad
