ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಅಧಿಕಾರ ಹಂಚಿಕೆ ನಿರ್ಣಾಯಕ ಘಟ್ಟಕ್ಕೆ ಬಂದು ತಲುಪಿದ್ದು, ನವದೆಹಲಿಯಲ್ಲಿ ನಡೆದ ಸರಣಿ ಸಭೆಯಲ್ಲಿ ರಾಹುಲ್ ಗಾಂಧಿ ಅವರು ನಾಯಕತ್ವ ಬದಲಾವಣೆ ಪ್ರಸ್ತಾಪ ಮಾಡಿದ್ದು, ಸಿಎಂ ಸಿದ್ದರಾಮಯ್ಯ ಅವರಿಗೆ ಆಫರ್ ನೀಡುವ ಮೂಲಕ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಹೇಳಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ರಾಹುಲ್ ಗಾಂಧಿ ಮಾತನ್ನು ತಮ್ಮ ಆಪ್ತರೊಂದಿಗೆ ಸಿದ್ದರಾಮಯ್ಯ ಚರ್ಚಿಸಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಹೀಗಾಗಿ ಈ ವಾರದಲ್ಲೇ ಹೊಸ ಸಿಎಂ ಅಧಿಕಾರಕ್ಕೆ ಏರಲಿದ್ದಾರೆ. ಇದಕ್ಕೆ ಪೂರಕವೆಂಬಂತೆ ಕಾಂಗ್ರೆಸ್ ಹೈಕಮಾಂಡ್ ನಾಯಕ ಕೆಸಿ ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೆವಾಲ ಅವರು ಮೇ 27 ರಂದು ಬೆಂಗಳೂರಿಗೆ ಆಗಮಿಸಲಿದ್ದು, ಹೊಸ ಮುಖ್ಯಮಂತ್ರಿ ಜತೆ ಉಪಮುಖ್ಯಮಂತ್ರಿ ನೇಮಕದ ಬಗ್ಗೆ ಚರ್ಚಿಸಲಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಸಿದ್ದರಾಮಯ್ಯ ಅವರು ನಾಡಿದ್ದು ಮೇ 28ಕ್ಕೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.
ಚಿತ್ರ: 2604


