ಎನ್‌ಎಂಡಿಸಿ ಜತೆಗೆ ಕೆಐಓಸಿಎಲ್ ವಿಲೀನಕ್ಕೆ ಕೇಂದ್ರ ಸಚಿವ ಎಚ್ಡಿಕೆಗೆ ಶಾಸಕ ಡಾ. ಭರತ್ ಶೆಟ್ಟಿ ಮನವಿ

ಜಿಲ್ಲಾ ಸುದ್ದಿ ಉಡುಪಿ ಕಾರವಾರ ಕುಂದಾಪುರ ಪುತ್ತೂರು ಮಂಗಳೂರು ಮಹಾನಗರ ರಾಜ್ಯ ಶಿರಸಿ

Spread the love

ಮಂಗಳೂರು: ಕುದುರೆಮುಖ ಕಬ್ಬಿಣದ ಅದಿರು ಕಂಪನಿಯನ್ನು ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದ (ಎನ್‌ಎಂಡಿಸಿ) ಜತೆ ವಿಲೀನಗೊಳಿಸಬೇಕು. ಕುದುರೆಮುಖ ಸಂಸ್ಥೆಯ ಕಾರ್ಮಿಕರ ಬಹುದಿನಗಳ ಬೇಡಿಕೆಗಳನ್ನು ಈಡೇರಿಸಲು ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಡಾ. ಭರತ್ ಶೆಟ್ಟಿ ಅವರು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್. ಡಿ. ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.

ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಮಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಉದ್ಯೋಗ ಅವಕಾಶಗಳನ್ನು ಸೃಷ್ಟಿಸುವ ನಿಟ್ಟಿನಲ್ಲಿ ಬಂಡವಾಳ ಹೂಡಿಕೆ ಮತ್ತು ಹೊಸ ಕೈಗಾರಿಕೆಗಳ ಸ್ಥಾಪನೆಗೆ ವಿಶೇಷ ಒತ್ತು ನೀಡಬೇಕು ಎಂದು ಮನವಿ ಮಾಡಿದರು.

ಜಿಲ್ಲೆಗೆ ಭೇಟಿ ನೀಡಿ ಕೇಂದ್ರದ ಅಧೀನದಲ್ಲಿರುವ ಕೈಗಾರಿಕೆಗಳ ಅಭಿವೃದ್ಧಿ ಕಾರ್ಯಗಳನ್ನು ಖುದ್ದು ಪರಿಶೀಲಿಸಿ, ಸ್ಥಳೀಯ ಸಮಸ್ಯೆಗಳ ಇತ್ಯರ್ಥಕ್ಕೆ ಆದ್ಯತೆ ನೀಡಿ ಜಿಲ್ಲಾ ಪ್ರವಾಸ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ರಾಜ್ಯ ಸರಕಾರ ಕುದುರೆಮುಖ ಕಬ್ಬಿಣದ ಅದಿರು ಕಂಪನಿಗೆ ಗಣಿಗಾರಿಕೆಗೆ ಅನುಮತಿ ನೀಡದಿರುವುದರಿಂದ ಕಂಪನಿಯ ಕಾರ್ಯಾಚರಣೆಗೆ ತೀವ್ರ ತೊಡಕಾಗಿದೆ. ಇದರಿಂದ ಕಾರ್ಮಿಕರ ಭವಿಷ್ಯ ಅತಂತ್ರ ಆಗಿದೆ. ಕಳೆದ ವಿಧಾನಸಭಾ ಅಧಿವೇಶನದಲ್ಲಿ ಕುದುರೆಮುಖ ಗಣಿಗಾರಿಕೆ ಸಮಸ್ಯೆ ಕುರಿತಾಗಿ ಗಮನ ಸೆಳೆದಿದ್ದೆ. ಸರ್ಕಾರ ಮಾತ್ರ ಸ್ಪಂದಿಸಿಲ್ಲ. ಈ ಹಿನ್ನೆಲೆಯಲ್ಲಿ ಗಣಿಗಾರಿಕೆ ಅನುಮತಿ ನೀಡುವಂತೆ ರಾಜ್ಯ ಸರಕಾರದ ಮೇಲೆ ಕೇಂದ್ರವು ಒತ್ತಡ ಹೇರಬೇಕು ಎಂದು ಶಾಸಕ ಭರತ್ ಶೆಟ್ಟಿ ಅವರು ಮನವಿ ಮಾಡಿದರು.

ಕುದುರೆಮುಖ ಸಂಸ್ಥೆಯನ್ನು ಎನ್‌ಎಂಡಿಸಿಯೊಂದಿಗೆ ವಿಲೀನಗೊಳಿಸುವುದರಿಂದ ಕಂಪನಿ ಪುನಶ್ಚೇತನ ಸಾಧ್ಯವಾಗಲಿದೆ ಹಾಗೂ ಕರಾವಳಿ ಭಾಗದ ಕೈಗಾರಿಕಾ ಅಭಿವೃದ್ಧಿಗೆ ಹೊಸ ವೇಗ ದೊರೆಯಲಿದೆ ಮನವಿ ಸಲ್ಲಿಸಿದರು.

Leave a Reply

Your email address will not be published. Required fields are marked *