ಮಂಗಳೂರು: ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಮೇ 30 ಹಾಗೂ 31 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದು, ಮೇ 30 ರಂದು ಸಂಜೆ 4.25ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, 5. 05 ಗಂಟೆಗೆ ಧರ್ಮಸ್ಥಳ ಹೆಲಿಪ್ಯಾಡ್ ಆಗಮನ, ಬಳಿಕ ಧರ್ಮಸ್ಥಳ ಅಥಿತಿಗೃಹದಲ್ಲಿ ವಾಸ್ತವ್ಯ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಮೇ 31 ರಂದು ಬೆಳಿಗ್ಗೆ 8 ಗಂಟೆಗೆ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಾಲಯಕ್ಕೆ ಭೇಟಿ, 11 ಗಂಟೆಗೆ ಬೆಳ್ತಂಗಡಿಯಲ್ಲಿ ಸಿರಿ ಇಂಡಸ್ಟ್ರೀಯಲ್ ಪಾರ್ಕ್ ಉದ್ಘಾಟನಾ ಕಾರ್ಯಕ್ರಮ, ಮಧ್ಯಾಹ್ನ 2 . 25 ಕ್ಕೆ ಧರ್ಮಸ್ಥಳ ಹೆಲಿಪ್ಯಾಡ್, 3.05 ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮನ, 3.15ಕ್ಕೆ ಉಪ ರಾಷ್ಟ್ರಪತಿಗಳು ಮಂಗಳೂರಿನಿಂದ ಕೇರಳದ ಕಣ್ಣೂರಿಗೆ ತೆರಳಲಿದ್ದಾರೆ ಎಂದರು.


