ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರ, ಸರಕಾರ ವಿಸರ್ಜನೆ, ಸಿದ್ದು ಇನ್ಮುಂದೇ ಹಂಗಾಮಿ ಸಿಎಂ

ಜಿಲ್ಲಾ ಸುದ್ದಿ ಉಡುಪಿ ಕಾರವಾರ ಕುಂದಾಪುರ ಪುತ್ತೂರು ಮಂಗಳೂರು ಮಹಾನಗರ ರಾಜಕೀಯ ರಾಜ್ಯ ಶಿರಸಿ

Spread the love

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿದ್ದ ಸಿಎಂ ಸ್ಥಾನದ ಬದಲಾವಣೆಯ ಪ್ರಕ್ರಿಯೆ ಅಂತಿಮ ಘಟ್ಟ ತಲುಪಿದೆ. ಗುರುವಾರ ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದರು. ಇದೀಗ ಸಿದ್ದರಾಮಯ್ಯ ಸಲ್ಲಿಸಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ಅಧಿಕೃತವಾಗಿ ಅಂಗೀಕರಿಸಿದ್ದು, ಸಿದ್ದರಾಮಯ್ಯ ಅವರು ಹಂಗಾಮಿ ಮುಖ್ಯಮಂತ್ರಿ ಆಗಿ ಕಾರ್ಯನಿರ್ವಹಣೆ ಮಾಡಲಿದ್ದಾರೆ. ಅವರ ಇಡೀ ಸಂಪೂರ್ಣ ಸಂಪುಟವನ್ನಿ ವಿಸರ್ಜನೆ ಮಾಡಿದ್ದು, ಎಲ್ಲರೂ ಮಾಜಿ ಆಗಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಸಿದ್ದರಾಮಯ್ಯ ಅವರು ಸಚಿವ ಸಂಪುಟ ಸಹೋದ್ಯೋಗಿಗಳೊಂದಿಗೆ ಉಪಹಾರ ಕೂಟ ನಡೆಸಿ ತಮ್ಮ ನಿರ್ಧಾರ ಪ್ರಕಟಿಸಿದ್ದರು. ತದನಂತರ ರಾಜಭವನಕ್ಕೆ ತೆರಳಿ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರಿಗೆ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಿದ್ದರು. ರಾಜ್ಯಪಾಲ ಗೆಹಲೋತ್ ಅವರು ಅವರು ತಮ್ಮ ವಿಶೇಷ ವಿವೇಚನಾಧಿಕಾರವನ್ನು ಬಳಸಿ ಈ ರಾಜೀನಾಮೆ ಅಂಗೀಕರಿಸಿದ್ದಾರೆ.

 

Leave a Reply

Your email address will not be published. Required fields are marked *