ಬ್ಯಾಕ್ ಟು ಬ್ಯಾಕ್ ಆರ್ ಸಿಬಿ ಗೆಲುವಿನ ಪತಾಕೆ, ಐಪಿಎಲ್ ನಲ್ಲಿ ಮತ್ತೇ ಅಜೇಯ, ಕೊಹ್ಲಿ ಆಟಕ್ಕೆ ಪ್ರೇಕ್ಷಕರ ಪಿಧಾ

ಕ್ರೀಡೆ ಉಡುಪಿ ಕಾರವಾರ ಕುಂದಾಪುರ ಜಿಲ್ಲಾ ಸುದ್ದಿ ದೇಶ ವಿದೇಶ ಪುತ್ತೂರು ಮಂಗಳೂರು ಮಹಾನಗರ ರಾಜ್ಯ ಶಿರಸಿ
<

Spread the love

ಬೆಂಗಳೂರು: ಕ್ರಿಕೆಟ್ ಪ್ರೇಮಿಗಳ ದಶಕಗಳ ಕನಸನ್ನು ನನಸು ಮಾಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಈಗ ಸತತ 2 ನೇ ಬಾರಿಗೆ ಐಪಿಎಲ್ ಟ್ರೋಫಿ ಎತ್ತಿ ಹಿಡಿಯುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದೆ.

<

ಅಹಮದಾಬಾದ್‌ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಗುಜರಾತ್ ತಂಡದ ವಿರುದ್ಧ ಭರ್ಜರಿ ಜಯಭೇರಿ ಬಾರಿಸಿದ ಆರ್​​ಸಿಬಿ, ಮತ್ತೊಮ್ಮೆ ಐಪಿಎಲ್ ಕಿರೀಟ ಮುಡಿಗೇರಿಸಿಕೊಂಡಿದೆ. ಈ ಸಲವೂ ಕಪ್ ನಮ್ಮದೇ ಎಂದು ಸಾರಿದ್ದ ಅಭಿಮಾನಿಗಳ ಸಂಭ್ರಮವೀಗ ಮುಗಿಲು ಮುಟ್ಟಿದೆ.

ಆರ್​​ಸಿಬಿ ಜಯಭೇರಿ ಬಾರಿಸುತ್ತಿದ್ದಂತೆ ರಾಜ್ಯದಾದ್ಯಂತ ಹಬ್ಬದ ವಾತಾವರಣ ನಿರ್ಮಾಣ ಆಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಮೂಲೆ ಮೂಲೆಗಳಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸುತ್ತಿದ್ದಾರೆ. ಇಡೀ ಟೂರ್ನಿ ಯುದ್ದಕ್ಕೂ ಹಾಗೂ ಫೈನಲ್ ಪಂದ್ಯದಲ್ಲಿ ರನ್ ಬೆನ್ನಟ್ಟುವಾಗ ಚೇಸ್ ಮಾಸ್ಟರ್ ವಿರಾಟ್ ಕೊಹ್ಲಿ ಪ್ರದರ್ಶಿಸಿದ ವಿರಾಟ ರೂಪ ಹಾಗೂ ನಾಯಕ ರಜತ್ ಪಟಿದಾರ್ ಅವರ ತಾಳ್ಮೆಯ ಆಟಕ್ಕೆ ಕ್ರಿಕೆಟ್ ಲೋಕ ಫಿದಾ ಆಗಿದೆ. ಜಯಗಳಿಸುತ್ತಿದ್ದಂತೆ ಟ್ವೀಟ್ ಮಾಡಿದ ಆರ್‌ಸಿಬಿ ತಂಡ, ಇದು ನಿಮ್ಮ ಗೆಲುವು, ಮನೆಯಲ್ಲಿಯೇ ಸುರಕ್ಷಿತವಾಗಿ ಸಂಭ್ರಮಿಸಿ ಎಂದು ಅಭಿಮಾನಿಗಳಿಗೆ ಸಂದೇಶ ರವಾನಿಸಿದೆ.

ಐಪಿಎಲ್ 2026 ರ ಫೈನಲ್‌ನಲ್ಲಿ ಗುಜರಾತ್ ತಂಡ ಮಣಿಸಿದ ಆರ್​ಸಿಬಿ ಸತತ 2ನೇ ಬಾರಿಗೆ ಟ್ರೋಫಿ ಎತ್ತಿ ಹಿಡಿದಿದೆ. ತಂಡದ ಈ ಗೆಲುವಿನಲ್ಲಿ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರ ಅಜೇಯ ಅರ್ಧಶತಕ ಗೆಲುವಿಗೆ ಪಾತ್ರ ವಹಿಸಿತು. ಗುಜರಾತ್ ನೀಡಿದ 156 ರನ್​ಗಳ ಗುರಿ ಬೆನ್ನಟ್ಟಿದ ಆರ್​ಸಿಬಿ ಪರ ವಿರಾಟ್ ಕೊಹ್ಲಿ ಸ್ಫೋಟಕ ಬ್ಯಾಟಿಂಗ್‌ ಪ್ರದರ್ಶನ ನೀಡುವ ಮೂಲಕ ತಂಡವನ್ನು ಕೇವಲ 3.3 ಓವರ್​ಗಳಲ್ಲಿಯೇ 50 ರನ್​ಗಳ ಗಡಿ ದಾಟಿಸಿದರು. ಹಾಗೆಯೇ ಕೇವಲ 25 ಎಸೆತಗಳಲ್ಲಿ ಕೊಹ್ಲಿ ತಮ್ಮ ಅರ್ಧಶತಕ ಪೂರೈಸಿದರು. ಇದು ಕೊಹ್ಲಿ ಅವರ ಐಪಿಎಲ್ ವೃತ್ತಿಜೀವನದ ಅತಿ ವೇಗದ ಅರ್ಧಶತಕವೂ ಆಗಿದೆ. ಅದರಲ್ಲೂ ಫೈನಲ್ ಪಂದ್ಯದಲ್ಲಿ ಈ ಐತಿಹಾಸಿಕ ಅರ್ಧಶತಕ ಸಿಡಿದಿದ್ದು ಸ್ಮರಣೀಯವಾಗಿತ್ತು.

ಈ ಹಿಂದೆ ಕೊಹ್ಲಿ 2018 ರ ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 26 ಎಸೆತಗಳಲ್ಲಿ 50 ರನ್ ಬಾರಿಸಿದ್ದರು. ಇದು ಈವರೆಗಿನ ದಾಖಲೆಯಾಗಿತ್ತು. ಇದೀಗ 25 ಎಸೆತಗಳಲ್ಲಿ ಅರ್ಧಶತಕ ಬಾರಿಸುವ ಮೂಲಕ ಕೊಹ್ಲಿ ತಮ್ಮ ಹಿಂದಿನ ದಾಖಲೆಯನ್ನು ಮುರಿದರು. ಬರೋಬ್ಬರಿ ಎಂಟು ವರ್ಷಗಳ ನಂತರ ಈ ಸಾಧನೆ ಮಾಡಿದ ಕೊಹ್ಲಿ, ಐಪಿಎಲ್ ಫೈನಲ್‌ನಲ್ಲಿ ವೇಗದ ಅರ್ಧಶತಕ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಜಂಟಿಯಾಗಿ 2ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಫೈನಲ್‌ನಲ್ಲಿ ವೇಗದ ಅರ್ಧಶತಕ ಬಾರಿಸಿದ ದಾಖಲೆ ಸುರೇಶ್ ರೈನಾ, ಡೇವಿಡ್ ವಾರ್ನರ್ ಮತ್ತು ವೆಂಕಟೇಶ್ ಅಯ್ಯರ್ ಅವರ ಹೆಸರಿನಲ್ಲಿದೆ. ಈ ಮೂವರು ಕೇವಲ 24 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು. ಇದೀಗ ಜಂಟಿಯಾಗಿ 2ನೇ ಸ್ಥಾನದಲ್ಲಿರುವ ಕೊಹ್ಲಿ ಜೊತೆಗೆ, ರೋಹಿತ್ ಶರ್ಮಾ ಮತ್ತು ಕ್ರಿಸ್ ಗೇಲ್ ಕೂಡ ಫೈನಲ್‌ನಲ್ಲಿ ತಲಾ 25 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದಾರೆ.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *