ಉಡುಪಿ ತಾಯಿ–ಮಕ್ಕಳ ಆಸ್ಪತ್ರೆ ವೈದ್ಯರ ಸಾಧನೆ, 8 ಕೆ.ಜಿ. ಗರ್ಭಕೋಶದ ಗಡ್ಡೆ ಯಶಸ್ವಿ ಶಸ್ತ್ರಚಿಕಿತ್ಸೆ: ಜಿಲ್ಲಾ ಸರ್ಜನ್ ಡಾ. ಅಶೋಕ್

ಆರೋಗ್ಯ ಉಡುಪಿ ಕಾರವಾರ ಕುಂದಾಪುರ ಜಿಲ್ಲಾ ಸುದ್ದಿ ಪುತ್ತೂರು ಮಂಗಳೂರು ಮಹಾನಗರ ರಾಜ್ಯ ಶಿರಸಿ
<

Spread the love

ಉಡುಪಿ: ವರ್ಷದಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದ 44 ವರ್ಷದ ಮಹಿಳೆಯ ಗರ್ಭಕೋಶದಲ್ಲಿದ್ದ ಬರೋಬ್ಬರಿ 8 ಕೆ.ಜಿ. ತೂಕದ ಫೈಬ್ರಾಯ್ಡ್ ಗಡ್ಡೆಯನ್ನು ಇಲ್ಲಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ತಜ್ಞ ವೈದ್ಯರ ತಂಡ ಯಶಸ್ವಿ ಶಸ್ತ್ರಚಿಕಿತ್ಸೆಯ ಮೂಲಕ ಹೊರತೆಗೆದಿದ್ದು, ಇದೊಂದು ಸಾಧನೆಯೇ ಸರಿ ಎಂದು ಜಿಲ್ಲಾ ಸರ್ಜನ್ ಡಾ. ಅಶೋಕ್ ಅವರು ತಿಳಿಸಿದರು.

<

ಮಹಿಳೆ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರೂ ಸಮಸ್ಯೆ ನಿವಾರಣೆಯಾಗದ ಹಿನ್ನೆಲೆಯಲ್ಲಿ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಆಗಮಿಸಿದ್ದರು. ವೈದ್ಯರು ಪರೀಕ್ಷಿಸಿದಾಗ ಅವರ ಹೊಟ್ಟೆ ಪೂರ್ಣ ಗರ್ಭಿಣಿಯ ಹೊಟ್ಟೆಯಂತೆ ಉಬ್ಬಿಕೊಂಡಿದ್ದು, ನೀರು ತುಂಬಿದ ಗಡ್ಡೆಯ ಲಕ್ಷಣಗಳು ಕಂಡು ಬಂದವು. ನಂತರ ಅಲ್ಟ್ರಾಸೌಂಡ್ ಹಾಗೂ ಸಿಟಿ ಸ್ಕ್ಯಾನ್ ಪರೀಕ್ಷೆ ನಡೆಸಿದಾಗ ಗರ್ಭಕೋಶದಲ್ಲಿ ಬೃಹತ್ ಗಾತ್ರದ ಫೈಬ್ರಾಯ್ಡ್ ಗಡ್ಡೆ ಇರುವುದು ದೃಢಪಟ್ಟಿತು. ಈ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲು ವೈದ್ಯರ ತಂಡ ನಿರ್ಧರಿಸಿತು ಎಂದರು.

ಜಿಲ್ಲಾ ಆಸ್ಪತ್ರೆ ಹಾಗೂ ತಾಯಿ–ಮಕ್ಕಳ ಆಸ್ಪತ್ರೆ ಜಿಲ್ಲಾ ಸರ್ಜನ್ ಡಾ. ಹೆಚ್. ಅಶೋಕ್ ಅವರ ಸಲಹೆ ಮತ್ತು ಮಾರ್ಗದರ್ಶನದಂತೆ ಮಹಿಳೆಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, 8 ಕೆ.ಜಿ. ತೂಕದ ಗಡ್ಡೆಯನ್ನು ಯಶಸ್ವಿಯಾಗಿ ಹೊರತೆಗೆಯಲಾಯಿತು. ಪ್ರಸ್ತುತ ಮಹಿಳೆ ಚೇತರಿಸಿಕೊಳ್ಳುತ್ತಿದ್ದು, ಆಸ್ಪತ್ರೆಯಲ್ಲಿ ಮುಂದಿನ ಚಿಕಿತ್ಸೆ ಮುಂದುವರಿದಿದೆ ಎಂದು ಶಸ್ತ್ರ ಚಿಕಿತ್ಸೆಯ ತಂಡದ ವೈದ್ಯರು ತಿಳಿಸಿದ್ದಾರೆ.

ವೈದ್ಯರ ತಂಡಕ್ಕೆ ಜಿಲ್ಲಾ ಸರ್ಜನ್ ಡಾ. ಅಶೋಕ ಪ್ರಶಂಸೆ

ಶಸ್ತ್ರಚಿಕಿತ್ಸೆಯನ್ನು ಸ್ತ್ರೀರೋಗ ತಜ್ಞರಾದ ಡಾ. ಶಶಾಂಕ್ ಕಿಣಿ, ಡಾ. ಜಾಸ್ಮಿನ್, ಡಾ. ಕವಿತಾ ಹಾಗೂ ಡಾ. ಅಮೃತಾಂಶ್ ಅವರ ತಂಡ ನೆರವೇರಿಸಿತು. ಅರವಳಿಕೆ ತಜ್ಞರಾದ ಡಾ. ಸೂರ್ಯನಾರಾಯಣ ಮತ್ತು ಡಾ. ರಾಜ್ ಗೋಪಾಲ್ ಭಂಡಾರಿ ಸಹಕರಿಸಿದರು. ಶುಶ್ರೂಷಾಧಿಕಾರಿ ರಕ್ಷಿತಾ ಹಾಗೂ ಓ.ಟಿ. ಸಹಾಯಕಿ ಸಂಗೀತ ತಂಡದ ಭಾಗವಾಗಿದ್ದರು. ಇಷ್ಟೊಂದು ದೊಡ್ಡ ಗಾತ್ರದ ಗರ್ಭಕೋಶದ ಗಡ್ಡೆಯನ್ನು ಯಶಸ್ವಿಯಾಗಿ ತೆರವುಗೊಳಿಸಿದ ವೈದ್ಯರು ಮತ್ತು ಸಿಬ್ಬಂದಿ ಕಾರ್ಯವನ್ನು ಜಿಲ್ಲಾ ಸರ್ಜನ್ ಡಾ. ಎಚ್. ಅಶೋಕ್ ಅವರು ಶ್ಲಾಘಿಸಿದರು.

ಸಿಬ್ಬಂದಿ ಸೇವೆ ಶ್ಲಾಘನೀಯ

ಸರ್ಕಾರಿ ಆಸ್ಪತ್ರೆಯ ವೈದ್ಯರು ಯಾವುದೇ ತೊಂದರೆ ಆಗದಂತೆ ಉತ್ತಮ ಚಿಕಿತ್ಸೆ ನೀಡಿದ್ದಾರೆ. ನಮ್ಮಂತಹ ಬಡವರಿಗೆ ಇಂತಹ ಚಿಕಿತ್ಸೆ ದೊರೆಯುತ್ತಿರುವುದು ಸಂತಸದ ಸಂಗತಿ. ಎಲ್ಲ ವೈದ್ಯರು ಹಾಗೂ ಸಿಬ್ಬಂದಿ ಸೇವೆಯನ್ನು ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆ ತಿಳಿಸಿದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *