ಕಾಂಗ್ರೆಸ್ ಹಿರಿಯ ಮುಖಂಡ ಬಿ.ಕೆ. ಹರಿಪ್ರಸಾದ್ ಗೆ ಕೆಪಿಸಿಸಿ ಪಟ್ಟ, ಹೈಕಮಾಂಡ್ ಅಧಿಕೃತ ಆದೇಶ

ಜಿಲ್ಲಾ ಸುದ್ದಿ ಉಡುಪಿ ಕಾರವಾರ ಕುಂದಾಪುರ ಪುತ್ತೂರು ಮಂಗಳೂರು ಮಹಾನಗರ ರಾಜಕೀಯ ರಾಜ್ಯ ಶಿರಸಿ
<

Spread the love

ನವದೆಹಲಿ: ಕಾಂಗ್ರೆಸ್ ಹೈಕಮಾಂಡ್ ಕೆಪಿಸಿಸಿ ಅಧ್ಯಕ್ಷರನ್ನಾಗಿ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ನೇಮಕ ಮಾಡಿ ಅಧಿಕೃತ ಆದೇಶ ಹೊರಡಿಸಿದೆ ಎಂದು ಪ್ರಕಟಣೆ ತಿಳಿಸಿದೆ.

<

https://www.karavalidailynews.com/wp-content/uploads/2026/06/PR_PCC_Karnataka-1.pdf

ಮೂಲ ಕಾಂಗ್ರೆಸಿಗ ಹಾಗೂ ಹೈಕಮಾಂಡ್ ಗೆ ತೀರಾ ಆಪ್ತರಾಗಿರುವ ಹಿಂದುಳಿದ ವರ್ಗದ ಕಾಂಗ್ರೆಸ್ ಪ್ರಮುಖ ಮುಖಂಡ ಬಿ.ಕೆ.ಹರಿಪ್ರಸಾದ್ ಅವರಿಗೆ ಮಣೆ ಹಾಕಿದೆ. ಬಿ.ಕೆ.ಹರಿಪ್ರಸಾದ್ ಈಡಿಗ ಸಮುದಾಯದವರಾಗಿದ್ದು, ಕಾಂಗ್ರೆಸ್ ​ನ ಪ್ರಬಲ ನಾಯಕರಾಗಿದ್ದಾರೆ‌. ಅಹಿಂದ ಸಮುದಾಯದವರನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಬಿ.ಕೆ.ಹರಿಪ್ರಸಾದ್ ಅವರಿಗೆ ಮಣೆ ಹಾಕಿದ್ದು, ಮಂತ್ರಿ ಮಂಡಳ ರಚನೆ ಆಗುತ್ತಿದ್ದಂತೆ ಈಗ ಅಧಿಕೃತ ಆದೇಶ ಸದ್ಯದಲ್ಲೇ ಹೊರ ಬೀದಿದ್ದೆ.

1979 ರಿಂದ 1981 ರಲ್ಲಿ ಅಖಿಲ ಭಾರತ ರಾಷ್ಟ್ರೀಯ ವಿದ್ಯಾರ್ಥಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಆಗಿದ್ದರು. 1989-1990 ಅಖಿಲ ಭಾರತ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿದ್ದರು. 1990, 2004, 2013 ಮತ್ತು 2014ರಲ್ಲಿ ರಾಜ್ಯಸಭೆ ಸದಸ್ಯರಾಗಿ ಆಯ್ಕೆ ಆಗಿದ್ದರು. 1997-1998ರಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಜಂಟಿ ಕಾರ್ಯದರ್ಶಿ ಆಗಿದ್ದರು. 2000-2001ರಲ್ಲಿ ಅಖಿಲ ಭಾರತ ಕಾಂಗ್ರೆಸ್ ಸೇವಾದಳದ ಅಧ್ಯಕ್ಷರಾಗಿದ್ದರು. 2001-2006 ರಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿಯಾಗಿ ಹಾಗೂ 2006-2018ರಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. 2022ರಿಂದ ಮೇ 2023ವರೆಗೆ ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕಾರ್ಯನಿರ್ವಹಿಸಿದ್ದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *