ಆಳ್ವಾಸ್ ಹೆಲ್ತ್ ಸೆಂಟರ್‌ನಲ್ಲಿ ಹೃದಯ ರೋಗಿಗಳಿಗೆ ಆಯುಷ್ಮಾನ್ ಯೋಜನೆಯಡಿ ಉಚಿತ ಅಂಜಿಯೋಪ್ಲಾಸ್ಟಿ ಚಿಕಿತ್ಸೆ: ಡಾ. ಮೋಹನ್ ಆಳ್ವ

ಆರೋಗ್ಯ ಉಡುಪಿ ಕಾರವಾರ ಕುಂದಾಪುರ ಜಿಲ್ಲಾ ಸುದ್ದಿ ಪುತ್ತೂರು ಮಂಗಳೂರು ಮಹಾನಗರ ರಾಜ್ಯ ಶಿರಸಿ
<

Spread the love

ಮೂಡುಬಿದಿರೆ: ಹೃದಯ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ಅರ್ಹ ರೋಗಿಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆ ಅಡಿ ಉಚಿತ ಅಂಜಿಯೋಪ್ಲಾಸ್ಟಿ ಚಿಕಿತ್ಸೆ ಲಭ್ಯವಿದ್ದು, ಬಿಪಿಎಲ್ ಕಾರ್ಡ್ ಹಾಗೂ ಆಯುಷ್ಮಾನ್ ಕಾರ್ಡ್ ಹೊಂದಿರುವವರು ಇದರ ಪ್ರಯೋಜನ ಪಡೆಯಬಹುದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

<

ಎದೆನೋವು, ಉಸಿರಾಟದ ತೊಂದರೆ, ಅತಿಯಾದ ದಣಿವು, ಹೃದಯ ಬಡಿತದ ಅಸಮಾನತೆ ಸೇರಿದಂತೆ ಹೃದಯ ಸಂಬಂಧಿತ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳುವುದು ಅಗತ್ಯ. ತಜ್ಞ ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಅಗತ್ಯ ಇರುವ ಬಿಪಿಎಲ್ ಕಾರ್ಡ್ ಹೊಂದಿರುವ ರೋಗಿಗಳಿಗೆ ಅಂಜಿಯೋಪ್ಲಾಸ್ಟಿ ಚಿಕಿತ್ಸೆಯನ್ನು ಸಂಪೂರ್ಣ ಉಚಿತವಾಗಿ ನೀಡಲಾಗುತ್ತಿದೆ. ಆಧುನಿಕ ಕ್ಯಾಥ್ ಲ್ಯಾಬ್, ನುರಿತ ಹೃದಯ ತಜ್ಞರು ಹಾಗೂ ಗುಣಮಟ್ಟದ ವೈದ್ಯಕೀಯ ಸೇವೆಗಳೊಂದಿಗೆ ಚಿಕಿತ್ಸೆ ಒದಗಿಸಲಾಗುತ್ತಿದೆ ಎಂದು ತಿಳಿಸಿದರು.

ವಿವಿಧ ಹೃದಯ ಚಿಕಿತ್ಸೆಗಳ ಸೌಲಭ್ಯ: ಯೋಜನೆ ಅಡಿ ಹೃದಯದ ರಕ್ತನಾಳಗಳಲ್ಲಿನ ಅಡಚಣೆ ನಿವಾರಿಸುವ ಅಂಜಿಯೋಪ್ಲಾಸ್ಟಿ, ಪೇಸ್‌ಮೇಕರ್ ಅಳವಡಿಕೆ, ಹೃದಯ ರಂಧ್ರ ಚಿಕಿತ್ಸೆ ಸೇರಿದಂತೆ ವಿವಿಧ ಹೃದಯ ಚಿಕಿತ್ಸೆಗಳು ಲಭ್ಯವಿವೆ. ಗ್ರಾಮೀಣ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗದ ಜನರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬಹುದು ಎಂದು ತಿಳಿಸಿದರು.

ಆಳ್ವಾಸ್ ಹೆಲ್ತ್ ಸೆಂಟರ್‌ನ ಸುತ್ತಲಿನ 30 ಕಿಲೋ ಮೀಟರ್ ವ್ಯಾಪ್ತಿಯ ಮೂಲ್ಕಿ, ನಾರಾವಿ, ಕಾರ್ಕಳ, ಕಿನ್ನಿಗೋಳಿ ಹಾಗೂ ಇತರೆ ಗ್ರಾಮೀಣ ಪ್ರದೇಶಗಳ ಅರ್ಹ ಫಲಾನುಭವಿಗಳು ಈ ಉಚಿತ ಚಿಕಿತ್ಸಾ ಸೌಲಭ್ಯ ಪಡೆಯಬಹುದಾಗಿದೆ ಎಂದು ತಿಳಿಸಿದರು.

ದಾಖಲೆಗಳೊಂದಿಗೆ ಆಸ್ಪತ್ರೆಗೆ ಭೇಟಿ ಅಗತ್ಯ: ಆಯುಷ್ಮಾನ್ ಕಾರ್ಡ್ ಹೊಂದಿರುವ ಅರ್ಹ ರೋಗಿಗಳು ಅಗತ್ಯ ದಾಖಲೆಗಳೊಂದಿಗೆ ಆಸ್ಪತ್ರೆಗೆ ಭೇಟಿ ನೀಡಿ ಉಚಿತ ಅಂಜಿಯೋಪ್ಲಾಸ್ಟಿ ಹಾಗೂ ಇತರ ಹೃದಯ ಚಿಕಿತ್ಸಾ ಸೌಲಭ್ಯಗಳನ್ನು ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ 98808–07509 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.

ಹೃದ್ರೋಗ ತಜ್ಞ ಡಾ. ದಿತೇಶ್ ಎಂ., ವೈದ್ಯಕೀಯ ಅಧೀಕ್ಷಕ ಡಾ. ಹರೀಶ್ ನಾಯಕ್, ಸಹಾಯಕ ವೈದ್ಯಕೀಯ ಅಧೀಕ್ಷಕ ಡಾ. ಶಮಂತ್ ಶೆಟ್ಟಿ ಹಾಗೂ ಆಳ್ವಾಸ್ ವೈದ್ಯಕೀಯ ಕಾಲೇಜಿನ ಕಾರ್ಯನಿರ್ವಾಹಕ ನಿರ್ದೇಶಕ ಡಾ. ವಿನಯಚಂದ್ರ ಶೆಟ್ಟಿ ಇದ್ದರು.

ಕೋಟ್

ಹೃದಯ ಸಂಬಂಧಿತ ಸಮಸ್ಯೆಗಳಿರುವ ಆರ್ಥಿಕವಾಗಿ ಹಿಂದುಳಿದ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ದೊರಕಬೇಕು ಎಂಬ ಉದ್ದೇಶದಿಂದ ಆಯುಷ್ಮಾನ್ ಯೋಜನೆಯಡಿ ಉಚಿತ ಚಿಕಿತ್ಸಾ ಸೌಲಭ್ಯ ಕಲ್ಪಿಸಲಾಗಿದೆ.
ಡಾ. ಎಂ. ಮೋಹನ ಆಳ್ವ, ಅಧ್ಯಕ್ಷ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ

ಮುಖ್ಯಾಂಗಳು

► ಬಿಪಿಎಲ್ ಹಾಗೂ ಆಯುಷ್ಮಾನ್ ಕಾರ್ಡ್ ಹೊಂದಿದವರಿಗೆ ಉಚಿತ ಅಂಜಿಯೋಪ್ಲಾಸ್ಟಿ
► ಆಧುನಿಕ ಕ್ಯಾಥ್ ಲ್ಯಾಬ್ ಮತ್ತು ಹೃದಯ ತಜ್ಞರ ಸೇವೆ
► ಪೇಸ್‌ಮೇಕರ್ ಅಳವಡಿಕೆ ಸೇರಿದಂತೆ ವಿವಿಧ ಹೃದಯ ಚಿಕಿತ್ಸೆಗಳು
► ಗ್ರಾಮೀಣ ಭಾಗದ ಫಲಾನುಭವಿಗಳಿಗೆ ಹೆಚ್ಚಿನ ಅನುಕೂಲ

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *