ಯೋಗ ಅಧಿವೇಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಅಗತ್ಯ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀ ಪ್ರಿಯಾ

ಜಿಲ್ಲಾ ಸುದ್ದಿ ಕಾರವಾರ ಕ್ರೀಡೆ ಶಿರಸಿ
<

Spread the love

ಕಾರವಾರ: ಅಂತರ ರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ, ಆಯುಷ್ ಸಚಿವಾಲಯವು ಇದೇ 14 ರಂದು ಗಿನ್ನೆಸ್ ವಿಶ್ವ ದಾಖಲೆಯ ಅತಿದೊಡ್ಡ ಆನ್‌ಲೈನ್ ಯೋಗ ಅಧಿವೇಶನವನ್ನು ಆಯೋಜಿಸುತ್ತಿದ್ದು, ಈ ಸಾಮೂಹಿಕ ಆಚರಣೆಗೆ ಜಿಲ್ಲೆಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆ ಯಲ್ಲಿ ನೋಂದಣಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀ ಪ್ರಿಯಾ ಅವರು ತಿಳಿಸಿದರು.

<

ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ, ಅಂತಾರಾಷ್ಟ್ರೀಯ ಯೋಗ ದಿಚಾರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಯೋಗ ಅಧಿವೇಶನವು ದೇಶಾದ್ಯಂತ ಯೋಗ ಸಾಧಕರು ಮತ್ತು ನಾಗರಿಕರನ್ನು ಒಟ್ಟುಗೂಡಿಸುವ ಮುಖ್ಯಉದ್ದೇಶ ಹಾಗೂ ಆರೋಗ್ಯ ಮತ್ತು ಯೋಗಕ್ಷೇಮದ ಸಾಮೂಹಿಕ ಆಚರಣೆಯಾಗಿದೆ. ಇದರಲ್ಲಿ ಭಾಗವಹಿಸುವವರು 1800-315-7008 ಗೆ ಮಿಸ್ ಕಾಲ್ ನೀಡುವ ಮೂಲಕ ನೋಂದಾಯಿಸಿಕೊಳ್ಳಬಹುದು . ನೊಂದಣಿಯ ನಂತರ ಅಧಿವೇಶನ ಲಿಂಕ್ ಹೊಂದಿರುವ ವಾಟ್ಸ್ ಆ್ಯಪ್ ಸಂದೇಶವನ್ನು ಕಳುಹಿಸಲಾಗುತ್ತದೆ ಎಂದರು.

ಜೂನ್ 21 ರಂದು ನಡೆಯುವ ಅಂತರ ರಾಷ್ಟಿಯ ಯೋಗ ದಿನಾಚರಣೆಯ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಕಾರವಾರದ ಪೊಲೀಸ್ ಕಲ್ಯಾಣ ಮಂಟಪದಲ್ಲಿ ಆಯೋಜಿಸಲು ಎಲ್ಲಾ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಆಯುಷ್ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲೆಯ ವಿವಿಧ ಶಾಲಾ ಕಾಲೇಜ್ ವಿದ್ಯಾರ್ಥಿಗಳು, ಎನ್.ಸಿ.ಸಿ., ಎನ್ ಎಸ್ ಎಸ್, ಯೋಗ ತರಬೇತಿ ನೀಡುವ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ಸಾರ್ವಜನಿಕರನ್ನು ಒಳಗೊಂಡು ಕಾರ್ಯಕ್ರಮ ಆಯೋಜಿಸುವಂತೆ ಮತ್ತು ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಯೋಗಾಭ್ಯಾಸ ಮಾಡಲು ಅಗತ್ಯ ಪೂರಕ ವ್ಯವಸ್ಥೆಗಳನ್ನು ಕೈಗೊಳ್ಳುವಂತೆ ಹಾಗೂ ತರಬೇತಿ ನೀಡಲು ಯೋಗ ಶಿಕ್ಷಕರನ್ನು ನಿಯೋಜಿಸುವಂತೆ ತಿಳಿಸಿದರು.

ನೌಕರರು ತಮ್ಮ ಕೆಲಸದ ಅವಧಿಯಲ್ಲಿನ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ಮತ್ತು ಹೆಚ್ಚಿನ ಉತ್ಸಾಹದಿಂದ ಕಾರ್ಯನಿರ್ವಹಿಸಲು ಅನುಕೂಲವಾಗುವಂತೆ ಆಯುಷ್ ಸಚಿವಾಲಯವು ಯೋಗದ ಸರಳ ಆಸನಗಳನ್ನು ಪರಿಚಯಿಸಿದ್ದು ಎಲ್ಲಾ ನೌಕರರು ಇದರ ಪ್ರಯೋಜನ ಪಡೆಯುವಂತೆ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಡಿವೈಎಸ್ಪಿ ಗಿರೀಶ್, , ಜಿಲ್ಲಾ ಆಯುಷ್ ಅಧಿಕಾರಿ ಡಾ.ಪ್ರವೀಣ್, ಆಯುಷ್ ಇಲಾಖೆಯ ಸಹಾಯಕ ಆಡಳಿತಾಧಿಕಾರಿ ಸಂಜು ನಾಯ್ಕ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸ್ವಯಂ ಸೇವಾ ಸಂಘಟನೆಗಳ ಪದಾಧಿಕಾರಿಗಳು ಇದ್ದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *