ವಿದ್ಯಾರ್ಥಿಗಳು ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಲಿ: ಡಾ. ಎಂ.ಬಿ. ಪುರಾಣಿಕ್

ಜಿಲ್ಲಾ ಸುದ್ದಿ ಪುತ್ತೂರು ಮಂಗಳೂರು ಮಹಾನಗರ ರಾಜ್ಯ ಶಿಕ್ಷಣ

Spread the love

ತಲಪಾಡಿ: ಶಾರದಾ ವಿದ್ಯಾನಿಕೇತನ ಪದವಿಪೂರ್ವ ಕಾಲೇಜಿನ ಶೈಕ್ಷಣಿಕ ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಿಗಾಗಿ ಆಯೋಜಿಸಿದ್ದ ಓರಿಯೆಂಟೇಶನ್ ಕಾರ್ಯಕ್ರಮ ಭಾನುವಾರ ಶಾರದಾ ವಿದ್ಯಾನಿಕೇತನ ಕ್ಯಾಂಪಸ್‌ನ ಭೂವರಾಹ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಎಂ.ಬಿ. ಪುರಾಣಿಕ್, ವಿದ್ಯಾರ್ಥಿಗಳು ಸಂಸ್ಥೆಯು ಒದಗಿಸುವ ವಿವಿಧ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಜೀವನದಲ್ಲಿ ಉನ್ನತ ಸಾಧನೆ ಮಾಡಬೇಕು ಎಂದು ಕರೆ ನೀಡಿದರು.

ತಮ್ಮ ವಿದ್ಯಾರ್ಥಿ ಜೀವನದ ಅನುಭವಗಳನ್ನು ಹಂಚಿಕೊಂಡ ಅವರು, ಪೋಷಕರಿಗೆ ಗೌರವ ನೀಡುವುದು, ಭಾರತೀಯ ಸಂಸ್ಕೃತಿ ಹಾಗೂ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ಮತ್ತು ಪ್ರತಿಯೊಂದು ಕ್ಷೇತ್ರದಲ್ಲೂ ಸಾಧನೆ ಮಾಡುವ ಮನೋಭಾವ ಬೆಳೆಸಿಕೊಳ್ಳುವುದು ಅಗತ್ಯ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ನಿರ್ದೇಶಕ ಸಮೀರ್ ಪುರಾಣಿಕ್ ಮಾತನಾಡಿ, ವಿದ್ಯಾರ್ಥಿಗಳು ಆತ್ಮವಿಶ್ವಾಸ ಮತ್ತು ದೃಢ ಸಂಕಲ್ಪದೊಂದಿಗೆ ಗುರಿ ಸಾಧನೆಯತ್ತ ಮುನ್ನಡೆಯಬೇಕು ಎಂದರು. ವಸತಿ ನಿಲಯದಲ್ಲಿ ವಿದ್ಯಾಭ್ಯಾಸ ಮಾಡಿದ ತಮ್ಮ ಅನುಭವವನ್ನು ಹಂಚಿಕೊಂಡ ಅವರು, ಶಿಸ್ತು, ಸ್ವಾವಲಂಬನೆ ಹಾಗೂ ಪರಿಶ್ರಮದ ಮಹತ್ವವನ್ನು ವಿವರಿಸಿದರು. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ವಿನಾಯಕ ಬಿ.ಜಿ. ಅವರು ಕಾಲೇಜಿನ ಶೈಕ್ಷಣಿಕ ಚಟುವಟಿಕೆಗಳು, ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ, ಶೈಕ್ಷಣಿಕ ಮೇಲ್ವಿಚಾರಣಾ ವ್ಯವಸ್ಥೆ ಹಾಗೂ ವಿದ್ಯಾರ್ಥಿ ಬೆಂಬಲ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ಶಿಸ್ತು, ಸಮಯಪಾಲನೆ ಮತ್ತು ನಿರಂತರ ಪರಿಶ್ರಮದ ಮಹತ್ವವನ್ನೂ ವಿವರಿಸಿದರು.

ಕಾರ್ಯಕ್ರಮದಲ್ಲಿ ಶಾರದಾ ವಿದ್ಯಾನಿಕೇತನ ಶಾಲೆಯ ಪ್ರಾಂಶುಪಾಲೆ ಸುಷ್ಮಾ ದಿನಕರ್, ಶಾರದಾ ವಿದ್ಯಾನಿಕೇತನ ಡೇ ಸ್ಕೂಲ್ ಪ್ರಾಂಶುಪಾಲ ಮೋಹನದಾಸ್, ಪ್ರವೇಶ ವಿಭಾಗದ ವ್ಯವಸ್ಥಾಪಕ ವಿವೇಕ್ ತಂತ್ರಿ, ಆಡಳಿತ ವ್ಯವಸ್ಥಾಪಕ ಪ್ರಫುಲ್ ಹಾಗೂ ಉಪಪ್ರಾಂಶುಪಾಲ ಸುರೇಶ್ ಭಟ್ ಇದ್ದರು.

ಜೀವಶಾಸ್ತ್ರ ವಿಭಾಗದ ಸಹನಾ ಪ್ರಾರ್ಥಿಸಿದರು. ಇಂಗ್ಲಿಷ್ ವಿಭಾಗದ ಅಶೋಕ್ ಕಾರ್ಯಕ್ರಮ ನಿರೂಪಿಸಿದರು. ರಸಾಯನಶಾಸ್ತ್ರ ವಿಭಾಗದ ಶರ್ಮಿಳಾ ವಂದಿಸಿದರು.

ಹೈಲೈಟ್ಸ್
• ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಓರಿಯೆಂಟೇಶನ್
• ಶೈಕ್ಷಣಿಕ ವ್ಯವಸ್ಥೆ, ಅವಕಾಶಗಳು ಮತ್ತು ನಿರೀಕ್ಷೆಗಳ ಕುರಿತು ಮಾಹಿತಿ
• ಶಿಸ್ತು, ಸಂಸ್ಕಾರ ಹಾಗೂ ಸರ್ವತೋಮುಖ ಬೆಳವಣಿಗೆಗೆ ಒತ್ತು
• ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ಮತ್ತು ಗುರಿಸಾಧನೆಯ ಸಂದೇಶ

Leave a Reply

Your email address will not be published. Required fields are marked *