ಕಾರವಾರ( ಜೋಯಿಡಾ): ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಚಾಪೋಲಿ ಸಮೀಪ ಗುರುವಾರ ಬೆಳಿಗ್ಗೆ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 10 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಪಘಾತದಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣ ಆಗಿದ್ದು, ಕಾರವಾರ–ಜೋಯಿಡಾ ರಸ್ತೆಯ ಸಂಚಾರದಲ್ಲಿ ಅಸ್ತವ್ಯಸ್ತವಾಗಿತ್ತು.
ಉಳವಿ–ಇಚಲಕರಂಜಿ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೆಳಗಾವಿ–ಕಾರವಾರ ಮಾರ್ಗದ ಕೆಎಸ್‌ಆರ್‌ಟಿಸಿ ಬಸ್ ನಡುವೆ ಚಾಪೋಲಿ ಸಮೀಪ ಈ ಅಪಘಾತ ಸಂಭವಿಸಿದೆ. ಡಿಕ್ಕಿ ತೀವ್ರತೆಗೆ ಎರಡೂ ಬಸ್‌ಗಳ ಮುಂಭಾಗ ನಜ್ಜುಗುಜ್ಜಾಗಿದೆ.
ಸ್ಥಳೀಯರು ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಜೋಯಿಡಾ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಬಹುತೇಕರ ಆರೋಗ್ಯ ಸ್ಥಿತಿ ಸ್ಥಿರ ಆಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಅಪಘಾತದ ಪರಿಣಾಮ ಪ್ರಮುಖ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಕೆಲಕಾಲ ಅಡಚಣೆ ಉಂಟಾಯಿತು. ಬಳಿಕ ಪೊಲೀಸರು ಸ್ಥಳದಲ್ಲೇ ಕಾರ್ಯಾಚರಣೆ ನಡೆಸಿ ಸಂಚಾರ ಸುಗಮಗೊಳಿಸಿದರು. ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ದೌಡಾಯಿಸಿದ ಬಂದು ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಕುರಿತು ತನಿಖೆ ಆರಂಭಿಸಲಾಗಿದೆ.
What do you feel about this post?
Like
Love
Happy
Haha
Sad
