ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ತೆರವಾಗಿರುವ ಸ್ಥಾನಗಳ ಭರ್ತಿಗಾಗಿ ವಿಧಾನಸೌಧದಲ್ಲಿ ಗುರುವಾರ ನಡೆದ ಚುನಾವಣೆಯ ಮತದಾನ ಪ್ರಕ್ರಿಯೆಯಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ಬಿಜೆಪಿ ಸದಸ್ಯರು ಮತವನ್ನು ಚಲಾಯಿಸಿದರು.
ಪ್ರಜಾಪ್ರಭುತ್ವದ ಮೌಲ್ಯಗಳನ್ನು ಮತ್ತಷ್ಟು ಬಲಪಡಿಸುವ ಈ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಪರವಾಗಿ ಸ್ಪರ್ಧಿಸುತ್ತಿರುವ ಇಬ್ಬರೂ ಅಭ್ಯರ್ಥಿಗಳು ಭರ್ಜರಿ ವಿಜಯ ಸಾಧಿಸಲಿದ್ದಾರೆ ಎಂದು ಆರ್ ಅಶೋಕ ಹೇಳಿದರು.
ಅವರು ವಿಧಾನ ಪರಿಷತ್ತಿನಲ್ಲಿ ಜನಸಾಮಾನ್ಯರ ಆಶೋತ್ತರಗಳು, ಸಮಸ್ಯೆಗಳು ಹಾಗೂ ಅಭಿವೃದ್ಧಿಯ ವಿಚಾರಗಳನ್ನು ಪರಿಣಾಮಕಾರಿಯಾಗಿ ಪ್ರತಿನಿಧಿಸಿ ರಾಜ್ಯದ ಸರ್ವಾಂಗೀಣ ಪ್ರಗತಿಗೆ ತಮ್ಮ ಅಮೂಲ್ಯ ಕೊಡುಗೆ ನೀಡಲಿ ಎಂದು ತಿಳಿಸಿದರು.
What do you feel about this post?
0%
Like
0%
Love
0%
Happy
0%
Haha
0%
Sad
0%
