ಮೂಡುಬಿದಿರೆ : ಮೇ 2026 ರಲ್ಲಿ ನಡೆದ ಸಿಎ ಅಂತಿಮ ಪರೀಕ್ಷೆಯಲ್ಲಿ ಆಳ್ವಾಸ್ ಪದವಿ ಕಾಲೇಜಿನ ದೀಪಕ್ ಹೆಗ್ಡೆ ಅಖಿಲ ಭಾರತ ಮಟ್ಟದಲ್ಲಿ 28ನೇ ರ‍್ಯಾಂಕ್‌ಗಳಿಸುವ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿದ್ದಾರೆ. ಇವರ ಜತೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಒಟ್ಟು 8 ಜನ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಅಮೋಘ ಸಾಧನೆ ಮೆರೆದಿದ್ದಾರೆ.
ಸಿಎ ಅಂತಿಮ ಪರೀಕ್ಷೆಯಲ್ಲಿ ದೀಪಕ್ ಹೆಗ್ಡೆ, ನಿತೇಶ್ ಕಾಮತ್, ವೀಕ್ಷಾ ಶೆಟ್ಟಿ, ನಾಗರಾಜ ಮಂಜಿತ್ತಾಯ, ಪ್ರಣವ್ ಎಸ್ ಭಟ್, ವೈಷ್ಣವಿ ಜವಾರ್ ಅಕ್ಷಯ ಬಿಎಸ್, ಸುದೀಪ್ ಉತ್ತೀರ್ಣರಾಗಿ ಸಾಧನೆ ಮೆರೆದಿದ್ದಾರೆ.
ದೀಪಕ್ ಹೆಗ್ಡೆ ಆಳ್ವಾಸ್‌ನ ಶೈಕ್ಷಣಿಕ ದತ್ತು ಸ್ವೀಕಾರ ಯೋಜನೆ ಅಡಿ ಉಚಿತ ಶಿಕ್ಷಣದ ಸೌಲಭ್ಯ ಪಡೆದು ಪ್ರೌಢಶಿಕ್ಷಣ, ಪದವಿಪೂರ್ವ ಹಾಗೂ ಪದವಿ ಶಿಕ್ಷಣವನ್ನು ಪೂರ್ಣಗೊಳಿಸಿದ್ದಾರೆ. ಪದವಿ ವ್ಯಾಸಂಗದ ಅವಧಿಯಲ್ಲೇ ಸಿಎ ಇಂಟರ್‌ಮೀಡಿಯೇಟ್ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 10ನೇ ರ‍್ಯಾಂಕ್ ಗಳಿಸಿ ತಮ್ಮ ಪ್ರತಿಭೆಯನ್ನು ಸಾಬೀತುಪಡಿಸಿದ್ದ ಇವರು, ಇದೀಗ ಸಿಎ ಅಂತಿಮ ಪರೀಕ್ಷೆಯ ಎರಡೂ ಗ್ರೂಪ್‌ಗಳನ್ನು ಮೊದಲ ಪ್ರಯತ್ನದಲ್ಲೇ ಪಾಸಾಗಿ ಅಖಿಲ ಭಾರತ ಮಟ್ಟದಲ್ಲಿ 28ನೇ ರ‍್ಯಾಂಕ್ ಗಳಿಸುವ ಮೂಲಕ ಮತ್ತೊಂದು ಗಮನಾರ್ಹ ಸಾಧನೆ ನಿರ್ಮಿಸಿದ್ದಾರೆ.
ಸಿಎ ಅಂತಿಮ ಪರೀಕ್ಷೆಯಲ್ಲಿ ಆಳ್ವಾಸ್ ವಿದ್ಯಾರ್ಥಿಗಳು ವರ್ಷದಿಂದ ವರ್ಷಕ್ಕೆ ಅಖಿಲ ಭಾರತ ಮಟ್ಟದಲ್ಲಿ ಶ್ರೇಷ್ಠ ರ‍್ಯಾಂಕ್ ಗಳಿಸುತ್ತಿರುವುದು ಗುಣಮಟ್ಟದ ಶಿಕ್ಷಣ ಹಾಗೂ ಫಲಿತಾಂಶ ಕೇಂದ್ರಿತ ತರಬೇತಿಯ ಪ್ರತೀಕ. ಅಖಿಲ ಭಾರತ ಮಟ್ಟದಲ್ಲಿ 6, 10, 23, 28, 33ನೇ ರ‍್ಯಾಂಕ್‌ಗಳ ಜೊತೆಗೆ ನಾರಾರು ವಿದ್ಯಾರ್ಥಿಗಳು ಸಿಎ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣರಾಗುತ್ತಿರುವುದು ವಿದ್ಯಾರ್ಥಿಗಳ ಪರಿಶ್ರಮ, ಅಧ್ಯಾಪಕರ ಸಮರ್ಪಿತ ಮಾರ್ಗದರ್ಶನ ಮತ್ತು ಸಂಸ್ಥೆಯ ಶೈಕ್ಷಣಿಕ ಬದ್ದತೆಗೆ ದೊರೆತ ಗೌರವ ಎಂದು ಡಾ. ಎಂ. ಮೋಹನ್ ಆಳ್ವ ತಿಳಿಸಿದರು.
ಟ್ರಸ್ಟಿ ವಿವೇಕ್ ಆಳ್ವ, ಪ್ರಾಚರ‍್ಯ ಡಾ ಕುರಿಯನ್, ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ ಎಂಡಿ, ಸಿಎ ಸಂಯೋಜಕಿ ಅಪರ್ಣಾ ಅಭಿನಂದಿಸಿದ್ದಾರೆ.
What do you feel about this post?
Like
Love
Happy
Haha
Sad
