ರಾಯಚೂರು: ಖಾಸಗಿ ಶಾಲೆಯ ಅನುಮತಿ ನವೀಕರಣಕ್ಕೆ ಲಂಚ ಬೇಡಿಕೆ ಇಟ್ಟಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಸಿ)ಯನ್ನು ಲೋಕಾಯುಕ್ತ ಅಧಿಕಾರಿಗಳು ಬಲೆಗೆ ಬೀಳಿಸಿದ್ದಾರೆ.
ಬಂಧಿತನನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಎಫ್‌ಡಿಸಿ ಮಹಾಬಲೇಶ್ವರ ಎಸ್ ಎಂದು ಗುರುತಿಸಲಾಗಿದೆ. ರಾಂಪುರದ ಸಿದ್ಧಪ್ಪ ಅವರಿಗೆ ಸೇರಿದ ವಿದ್ಯಾಜ್ಯೋತಿ ಶಾಲೆಯ ಅನುಮತಿ ನವೀಕರಣ ಪ್ರಕ್ರಿಯೆ ಪೂರ್ಣಗೊಳಿಸಲು ಆರೋಪಿಯು 25 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ.
ಲಂಚ ನೀಡಲು ಇಚ್ಛಿಸದ ಸಿದ್ಧಪ್ಪ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಅದರಂತೆ ಅಧಿಕಾರಿಗಳು ಬಲೆ ಬೀಸಿ ಕಾರ್ಯಾಚರಣೆ ನಡೆಸಿದರು. ₹ 15 ಸಾವಿರ ಲಂಚದ ಹಣವನ್ನು ಮಹಾಬಲೇಶ್ವರ ಎಸ್ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಲೋಕಾಯುಕ್ತ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ.
What do you feel about this post?
0%
Like
0%
Love
0%
Happy
0%
Haha
0%
Sad
0%
