ದ.ಕ. ಜಿಲ್ಲೆಯಲ್ಲಿ12 ಕೇಂದ್ರಗಳಲ್ಲಿ ನೀಟ್ ಪರೀಕ್ಷೆ, ಬಿಗಿ ಭದ್ರತೆ: ಹೆಚ್ಚುವರಿ ಜಿಲ್ಲಾಧಿಕಾರಿ ರಾಜು

ಜಿಲ್ಲಾ ಸುದ್ದಿ ಪುತ್ತೂರು ಮಂಗಳೂರು ಮಹಾನಗರ ಶಿಕ್ಷಣ
<

Spread the love

ಮಂಗಳೂರು: ವೈದ್ಯಕೀಯ ಶಿಕ್ಷಣ ಪ್ರವೇಶಕ್ಕಾಗಿ ಜೂನ್ 21 ರಂದು ರಾಷ್ಟ್ರಾದ್ಯಂತ ನಡೆಯಲಿರುವ ನೀಟ್ ಪರೀಕ್ಷೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5570 ಅಭ್ಯರ್ಥಿಗಳು ನೋಂದಾಯಿಸಿದ್ದಾರೆ. ಜಿಲ್ಲೆಯ 12 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಎಲ್ಲವೂ ಮಂಗಳೂರು ಮಹಾನಗರ ವ್ಯಾಪ್ತಿಯಲ್ಲಿವೆ.

<

ಜಿಲ್ಲಾಧಿಕಾರಿ ಕಚೇರಿಯಲ್ಲಿ ಪೂರ್ವಭಾವಿ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಕೆ. ಅವರು ಮಾತನಾಡಿ, ಪರೀಕ್ಷೆಯನ್ನು ನಕಲು ಮುಕ್ತ, ಪಾರದರ್ಶಕ ಹಾಗೂ ವ್ಯವಸ್ಥಿತವಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸೂಚಿಸಿದರು. ಪ್ರತಿ ಕೊಠಡಿಯಲ್ಲಿ ಇಬ್ಬರು ಮೇಲ್ವಿಚಾರಕರು ಇರಲಿದ್ದಾರೆ. ಎನ್‌ಟಿಎ ವತಿಯಿಂದ ಪರೀಕ್ಷಾ ತಪಾಸಣೆಗೆ ಅಗತ್ಯ ಸಿಬ್ಬಂದಿ ಹಾಗೂ ಸಾಮಗ್ರಿಗಳನ್ನು ಒದಗಿಸಲಾಗಿದೆ ಎಂದರು.

ಪರೀಕ್ಷೆಯನ್ನು ಬಿಗಿ ಭದ್ರತೆಯಲ್ಲಿ ನಡೆಸಲು ಸಿಎಪಿಎಫ್ ಹಾಗೂ ಸ್ಥಳೀಯ ಪೊಲೀಸರನ್ನು ನಿಯೋಜಿಸಲಾಗುತ್ತಿದೆ. ಪ್ರತಿ ಕೇಂದ್ರಕ್ಕೂ ಸಶಸ್ತ್ರ ಭದ್ರತೆ ಒದಗಿಸಲಾಗುವುದು. ಎನ್‌ಟಿಎ ಇಬ್ಬರು ನೋಡಲ್ ಅಧಿಕಾರಿಗಳನ್ನು ನೇಮಿಸಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಗಾವಲು ಇರಲಿದೆ. ಮೊಬೈಲ್, ಇಯರ್‌ಫೋನ್, ಪೆನ್‌ಡ್ರೈವ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಸಾಧನಗಳಿಗೆ ಅನುಮತಿ ಇಲ್ಲ. ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಮೊಬೈಲ್ ಬಳಕೆ ಹಾಗೂ ಫೋಟೋಗ್ರಫಿಗೆ ಸಂಪೂರ್ಣ ನಿಷೇಧವಿದೆ ಎಂದರು.

ವಿದ್ಯಾರ್ಥಿಗಳಿಗೆ ಭಾನುವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1.30 ರವರೆಗೆ ಪ್ರವೇಶ ಅವಕಾಶವಿದ್ದು, ಮಧ್ಯಾಹ್ನ 2 ರಿಂದ ಸಂಜೆ 5.15ರವರೆಗೆ ಪರೀಕ್ಷೆ ನಡೆಯಲಿದೆ. ಅಂಗವಿಕಲರಿಗೆ ಗೆ ಹೆಚ್ಚುವರಿ ಒಂದು ಗಂಟೆ ಹಾಗೂ ಎಲ್ಲಾ ಅಭ್ಯರ್ಥಿಗಳಿಗೆ 15 ನಿಮಿಷ ಹೆಚ್ಚುವರಿ ಸಮಯ ನೀಡಲಾಗಿದೆ ಎಂದರು.

ನೀಟ್ ನೋಡಲ್ ಅಧಿಕಾರಿ ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲ ಟೇಕ್‌ಚಂದ್, ನೋಡಲ್ ಅಧಿಕಾರಿ ಜಸ್ವೀಂದರ್, ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ, ಪದವಿ ಪೂರ್ವ ಶಿಕ್ಷಣ ಇಲಾಖೆ ಕಚೇರಿ ಅಧೀಕ್ಷಕ ನಿತಿನ್ ಶೆಟ್ಟಿ ಹಾಗೂ ಪೊಲೀಸ್ ನಿರೀಕ್ಷಕ ಗೋಪಾಲಕೃಷ್ಣ ಇದ್ದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *