ನೀಟ್ ಮರು ಪರೀಕ್ಷೆ ಜೂನ್ 21: ಪಾರದರ್ಶಕವಾಗಿ ನಡೆಸಲು ಜಿಲ್ಲಾಧಿಕಾರಿ ಸ್ವರೂಪ ಸೂಚನೆ

ಜಿಲ್ಲಾ ಸುದ್ದಿ ಉಡುಪಿ ಕುಂದಾಪುರ ಮಹಾನಗರ ರಾಜ್ಯ ಶಿಕ್ಷಣ
<

Spread the love

ಉಡುಪಿ: ಜಿಲ್ಲೆಯಲ್ಲಿ ಜೂನ್ 21ರಂದು ನಡೆವ ನೀಟ್ (ಯುಜಿ) ಮರು ಪರೀಕ್ಷೆಯನ್ನು ಯಾವುದೇ ಲೋಪದೋಷಗಳಿಲ್ಲದೆ ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

<

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಗೊಂದಲವಿಲ್ಲದೆ ನಿರಾಳ ವಾತಾವರಣದಲ್ಲಿ ಪರೀಕ್ಷೆ ನಡೆಯಬೇಕು ಎಂದು ಹೇಳಿದರು. ಜಿಲ್ಲೆಯಲ್ಲಿ ಒಟ್ಟು 6 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 2,970 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ.

ಪರೀಕ್ಷೆ ಮಧ್ಯಾಹ್ನ 2 ರಿಂದ ಸಂಜೆ 5.15 ರವರೆಗೆ ನಡೆಯಲಿದ್ದು, ಈ ಬಾರಿ ಹೆಚ್ಚುವರಿ 15 ನಿಮಿಷಗಳ ಕಾಲಾವಕಾಶ ನೀಡಲಾಗಿದೆ. ವಿಕಲಚೇತನ ಅಭ್ಯರ್ಥಿಗಳಿಗೆ ಒಂದು ಗಂಟೆ ಹೆಚ್ಚುವರಿ ಸಮಯಾವಕಾಶ ಇರಲಿದೆ ಎಂದು ತಿಳಿಸಿದರು.

ಬೆಳಗ್ಗೆ 11 ರಿಂದ ಮಧ್ಯಾಹ್ನ 1.30 ರವರೆಗೆ ಪರಿಶೀಲನೆ ಕಾರ್ಯ ನಡೆಯಲಿದೆ. ನಂತರ ಬಂದ ವಿದ್ಯಾರ್ಥಿಗಳಿಗೆ ಪ್ರವೇಶ ಇರದು ಎಂದು ಅವರು ಸ್ಪಷ್ಟಪಡಿಸಿದರು. ಅಭ್ಯರ್ಥಿಗಳು ಪ್ರವೇಶ ಪತ್ರ, ಮೂಲ ಗುರುತಿನ ಚೀಟಿ ಮತ್ತು ಎರಡು ಭಾವಚಿತ್ರಗಳೊಂದಿಗೆ ಸಮಯಕ್ಕೆ ಮುಂಚಿತವಾಗಿ ಹಾಜರಾಗಬೇಕು ಎಂದು ಸೂಚಿಸಿದರು.

ಮೊಬೈಲ್ ಫೋನ್, ಸ್ಮಾರ್ಟ್ ವಾಚ್, ಕ್ಯಾಲ್ಕುಲೇಟರ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲಸೌಕರ್ಯಗಳ ವ್ಯವಸ್ಥೆ ಕಲ್ಪಿಸಬೇಕು ಎಂದು ಹೇಳಿದರು.

ಪರೀಕ್ಷಾ ಕೇಂದ್ರಗಳ ಸುತ್ತ ಪೊಲೀಸ್ ಭದ್ರತೆ, ಆರೋಗ್ಯ ಸಿಬ್ಬಂದಿ ನಿಯೋಜನೆ, ಅಗ್ನಿಶಾಮಕ ವ್ಯವಸ್ಥೆ ಹಾಗೂ ನಿರಂತರ ವಿದ್ಯುತ್ ಸರಬರಾಜು ಒದಗಿಸುವಂತೆ ಸಂಬಂಧಿತ ಇಲಾಖೆಗೆ ಸೂಚನೆ ನೀಡಲಾಗಿದೆ.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ನಾಯಕ್ ಸೇರಿದಂತೆ ವಿವಿಧ ಅಧಿಕಾರಿಗಳು ಇದ್ದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *