ಪ್ರತಿನಿತ್ಯ ಉತ್ತಮ ಆರೋಗ್ಯಕ್ಕೆ ಯೋಗ ಅಗತ್ಯ: ಜಿಪಂ ಉಪ ಕಾರ್ಯದರ್ಶಿ ಅಲ್ಲಾಬಕ್ಷ

ಜಿಲ್ಲಾ ಸುದ್ದಿ ಕಾರವಾರ ಶಿರಸಿ
<

Spread the love

ಕಾರವಾರ: ಪ್ರತಿದಿನ ಯೋಗಾಭ್ಯಾಸ ಮಾಡುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ವಿಶೇಷವಾಗಿ ಸರ್ಕಾರಿ ಕಚೇರಿಗಳಲ್ಲಿ ನಿರಂತರ ಒತ್ತಡದ ನಡುವೆ ಕಾರ್ಯನಿರ್ವಹಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿ ಯೋಗಾಭ್ಯಾಸ ಅಳವಡಿಸಿಕೊಂಡರೆ ಮಾನಸಿಕ ಒತ್ತಡ ಕಡಿಮೆಯಾಗುವುದರ ಜೊತೆಗೆ ದೈಹಿಕ ಆರೋಗ್ಯವೂ ಉತ್ತಮವಾಗಿರುತ್ತದೆ ಎಂದು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಎಂ.ಎಸ್. ಅಲ್ಲಾಬಕಷ್ ಹೇಳಿದರು.

<

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯುಷ್ ಇಲಾಖೆ ವತಿಯಿಂದ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಯೋಗ ಪ್ರದರ್ಶನ ಹಾಗೂ ಕರಪತ್ರ ಬಿಡುಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಯೋಗವು ಪ್ರಾಚೀನ ಕಾಲದಿಂದಲೂ ನಡೆದುಕೊಂಡು ಬಂದಿರುವ ಜೀವನಶೈಲಿಯ ಭಾಗವಾಗಿದ್ದು, ನಿಯಮಿತ ಯೋಗಾಭ್ಯಾಸದಿಂದ ಸದೃಢ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಅವರು ತಿಳಿಸಿದರು.

ಮುಂದಿನ ದಿನಗಳಲ್ಲಿ ಸರ್ಕಾರಿ ಸಿಬ್ಬಂದಿಗೆ ಕಣ್ಣಿನ ಆರೋಗ್ಯ ಸುಧಾರಣೆ ಹಾಗೂ ಒತ್ತಡ ನಿವಾರಣೆಗೆ ಸಂಬಂಧಿಸಿದ ವಿಶೇಷ ಯೋಗ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಆಯುಷ್ ಇಲಾಖೆ ವೈದ್ಯಾಧಿಕಾರಿಗಳಿಗೆ ಅವರು ಸೂಚಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಆನಂದಸಾ ಅಬೀಬ್, ಯೋಜನಾ ನಿರ್ದೇಶಕ ಕರೀಂ ಅಸಾದಿ, ಜಿಲ್ಲಾ ಆಯುಷ್ ಇಲಾಖೆ ಅಧಿಕಾರಿ ಡಾ. ಪ್ರವೀಣ್, ಆಯುಷ್ ವೈದ್ಯಾಧಿಕಾರಿ ಡಾ. ಮಲ್ಲಿಕಾರ್ಜುನ್ ಹಿರೇಮಠ ಸೇರಿದಂತೆ ಹಲವರು ಇದ್ದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *