ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 86 ಮಕ್ಕಳು ಕಾಣೆಯಾದ ಪ್ರಕರಣ ದಾಖಲು: ಜಿಲ್ಲಾಧಿಕಾರಿ ದರ್ಶನ್

ಮಂಗಳೂರು ಜಿಲ್ಲಾ ಸುದ್ದಿ ಪುತ್ತೂರು ಮಹಾನಗರ
<

Spread the love

ಮಂಗಳೂರು: ದ.ಕ ಜಿಲ್ಲೆಯಲ್ಲಿ ಮಕ್ಕಳ ನಾಪತ್ತೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ವಿಳಂಬವಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

<

ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಕ್ಕಳ ಕಲ್ಯಾಣ ಹಾಗೂ ರಕ್ಷಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಳೆದ ಒಂದು ವರ್ಷದಲ್ಲಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 86 ಮಕ್ಕಳು ಕಾಣೆಯಾದ ಪ್ರಕರಣಗಳು ದಾಖಲಾಗಿದ್ದು, ಅವರಲ್ಲಿ 79 ಮಕ್ಕಳು ಪತ್ತೆಯಾಗಿದ್ದಾರೆ. ಉಳಿದ ಪ್ರಕರಣಗಳನ್ನೂ ಆದ್ಯತೆಯ ಮೇರೆಗೆ ತನಿಖೆ ನಡೆಸಿ ಮಕ್ಕಳನ್ನು ಸುರಕ್ಷಿತವಾಗಿ ಪತ್ತೆಹಚ್ಚಬೇಕು ಎಂದರು.

ಜಿಲ್ಲೆಯ 69 ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ 2,581 ಮಕ್ಕಳು ಶಿಕ್ಷಣ ಪಡೆಯುತ್ತಿದ್ದು, ಅಧಿಕಾರಿಗಳು ನಿಯಮಿತವಾಗಿ ಭೇಟಿ ನೀಡಿ ಮಕ್ಕಳ ವಾಸ್ತವ್ಯ, ಆಹಾರ ಹಾಗೂ ಮೂಲಸೌಕರ್ಯಗಳನ್ನು ಪರಿಶೀಲಿಸಬೇಕು. ಕ್ಕಳ ಸಹಾಯವಾಣಿ 1098 ಸಂಖ್ಯೆಯನ್ನು ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಪ್ರದರ್ಶಿಸಲು ಕ್ರಮ ಕೈಗೊಳ್ಳಬೇಕು. ಕಳೆದ ಒಂದು ವರ್ಷದಲ್ಲಿ ಸಹಾಯವಾಣಿಗೆ 763 ಪ್ರಕರಣಗಳು ದಾಖಲಾಗಿವೆ ಎಂದರು.

ಜಿಲ್ಲೆಯಲ್ಲಿ ಹೆಚ್ಚುತ್ತಿರುವ ನರ್ಸರಿ, ಬೇಬಿ ಸಿಟಿಂಗ್ ಹಾಗೂ ಇತರೆ ಪೂರ್ವ ಪ್ರಾಥಮಿಕ ಶಾಲೆಗಳ ನೋಂದಣಿ ಮತ್ತು ಮೇಲ್ವಿಚಾರಣೆಗೆ ನಿಯಮ ರೂಪಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಗೆ ಸೂಚನೆ ನೀಡಿದರು.

ಬಾಲಕಾರ್ಮಿಕರ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಪರಿಶೀಲನೆ ತೀವ್ರಗೊಳಿಸಬೇಕು ಎಂದು ಕಾರ್ಮಿಕ ಇಲಾಖೆಗೆ ಸೂಚಿಸಲಾಯಿತು. ನಿಯಮ ಉಲ್ಲಂಘಿಸಿದ 92 ಸಂಸ್ಥೆಗಳ ವಿರುದ್ಧ ಪ್ರಕರಣ ದಾಖಲಿಸಿ, 49 ಪ್ರಕರಣಗಳಲ್ಲಿ 3.06 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಕೆ ಅವರು ಮಾತನಾಡಿ, ವಿವಿಧ ಹಾಸ್ಟೆಲ್‍ಗಳಲ್ಲಿರುವ ಹೆಣ್ಣು ಮಕ್ಕಳ ಆರೋಗ್ಯ ತಪಾಸಣೆ, ಕೌನ್ಸಿಲಿಂಗ್ ನಡೆಸಬೇಕು. ಮಕ್ಕಳ ಆರೋಗ್ಯ ಸ್ಥಿತಿಯಲ್ಲಿ ಏರುಪೇರು ಕಂಡು ಬಂದರೆ ಅಥವಾ ಯಾವುದೇ ಲೈಂಗಿಕ ಶೋಷಣೆಯ ಮಾಹಿತಿ ನೀಡಿದರೆ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ನ್ಯಾಯಾಧೀಶೆ ಜೈಬುನ್ನೀಸಾ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಇದ್ದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *