ಉಕ ಜಿಲ್ಲೆಯಲ್ಲಿ 873 ಲಸಿಕಾ ಕೇಂದ್ರ, 28ಕ್ಕೆ ಪಲ್ಸ್ ಪೊಲಿಯೋ ಅಭಿಯಾನ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

ಆರೋಗ್ಯ ಕಾರವಾರ ಜಿಲ್ಲಾ ಸುದ್ದಿ ಶಿರಸಿ
<

Spread the love

ಕಾರವಾರ: ಉ.ಕ ಜಿಲ್ಲೆಯಾದ್ಯಂತ ಇದೇ 28 ರಂದು ನಡೆವ ಪಲ್ಸ್ ಪೊಲಿಯೋ ಲಸಿಕಾ ಅಭಿಯಾನ ಯಶಸ್ವಿಗೊಳಿವುದಕ್ಕೆ ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

<

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಲಸಿಕೆ ತಲುಪಬೇಕು ಹಾಗೂ ಯಾವುದೇ ಮಗು ಲಸಿಕೆಯಿಂದ ವಂಚಿತರಾಗಬಾರದು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟು 873 ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದ್ದು, ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಸುಮಾರು 89,388 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಟ್ರಾನ್ಸಿಟ್ ಕೇಂದ್ರಗಳು ಹಾಗೂ ವಿಶೇಷ ಪ್ರದೇಶಗಳಲ್ಲಿಯೂ ಲಸಿಕಾ ಅಭಿಯಾನ ನಡೆಯಲಿದೆ ಎಂದರು.

ಲಸಿಕಾ ಕಾರ್ಯಕ್ಕೆ ನಿಯೋಜಿತ ವೈದ್ಯರು, ಆರೋಗ್ಯ ಇಲಾಖೆ ಸಿಬ್ಬಂದಿ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ತಮ್ಮ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸಬೇಕು ಎಂದು ಅವರು ಸೂಚಿಸಿದರು. ಜೂನ್ 27ರಂದು ಪಲ್ಸ್ ಪೋಲಿಯೋ ಜಾಗೃತಿ ಜಾಥಾ ಆಯೋಜಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಲಸಿಕೆಯನ್ನು ಸುರಕ್ಷಿತವಾಗಿ ಸಂರಕ್ಷಿಸಲು ನಿರಂತರ ವಿದ್ಯುತ್ ಪೂರೈಕೆ ಅಗತ್ಯವಾಗಿರುವ ಹಿನ್ನೆಲೆಯಲ್ಲಿ ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಹೆಸ್ಕಾಂ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ಕಟ್ಟಡ ಕಾರ್ಮಿಕರ ಮಕ್ಕಳು, ವಲಸೆ ಕುಟುಂಬಗಳು ಹಾಗೂ ಕೊಳಚೆ ಪ್ರದೇಶಗಳಲ್ಲಿ ವಾಸಿಸುವ ಐದು ವರ್ಷದೊಳಗಿನ ಮಕ್ಕಳಿಗೆ ವಿಶೇಷ ಗಮನ ನೀಡಬೇಕು ಎಂದು ಅವರು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಅಲ್ಲಾಭಕ್ಷ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶಂಕರ ರಾವ್, ಆರ್.ಸಿ.ಎಚ್ ಅಧಿಕಾರಿ ಡಾ. ನಟರಾಜ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ರಮೇಶ್ ರಾವ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವಿನಿ ಬೋರ್ಕರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *