ಮಂಗಳೂರು: ಇಲ್ಲಿನ ಸಹ್ಯಾದ್ರಿ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜು ಹಾಗೂ ಬೆಂಗಳೂರಿನ ಕ್ರಿಸ್ತು ಜಯಂತಿ ಡೀಮ್ಡ್ ಟು ಬಿ ವಿವಿ ನಡುವೆ ಶೈಕ್ಷಣಿಕ ಸಹಕಾರ ಒಪ್ಪಂದಕ್ಕೆ ಸಹಿ ಹಾಕಲಾಯಿತು.
ಸಹ್ಯಾದ್ರಿ ಕಾಲೇಜು ಆವರಣದಲ್ಲಿ ನಡೆದ ಸಮಾರಂಭದಲ್ಲಿ ಒಪ್ಪಂದ ಕಾರ್ಯಕ್ರಮ ನೆರವೇರಿತು. ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ ಕುಲಪತಿ ರೆವ್. ಡಾ. ಅಗಸ್ಟಿನ್ ಜಾರ್ಜ್ ಸಿ.ಎಂ.ಐ ಹಾಗೂ ಮುಖ್ಯ ಮಾನವ ಸಂಪನ್ಮೂಲ ಅಧಿಕಾರಿ ರೆವ್. ಫಾ. ಜೋಶಿ ಮ್ಯಾಥ್ಯೂ ಸಿ.ಎಂ.ಐ ಇದ್ದರು.

ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜಿನ ಸಂಸ್ಥಾಪಕ ಡಾ. ಮಂಜುನಾಥ ಭಂಡಾರಿ ಅವರು ಮಾತನಾಡಿ, ಈ ಸಹಕಾರವು ಬಿಬಿಎ, ಬಿಸಿಎ ಹಾಗೂ ಎಂಸಿಎ ಕೋರ್ಸ್‌ಗಳ ಗುಣಮಟ್ಟದ ಅಭಿವೃದ್ಧಿಗೆ ನೆರವಾಗಲಿದೆ ಎಂದು ಹೇಳಿದರು. ಸಹ್ಯಾದ್ರಿ ಕಾಲೇಜನ್ನು ಮುಂದಿನ ದಿನಗಳಲ್ಲಿ ವಿಶ್ವವಿದ್ಯಾಲಯ ಮಟ್ಟಕ್ಕೆ ಮೇಲ್ದರ್ಜೆಗೆ ಏರಿಸುವ ಆಶಯವನ್ನೂ ಅವರು ವ್ಯಕ್ತಪಡಿಸಿದರು.
ಕ್ರಿಸ್ತು ಜಯಂತಿ ವಿವಿ ಕುಲಪತಿ ಅಗಸ್ಟಿನ್ ಜಾರ್ಜ್ ಅವರು ಮಾತನಾಡಿ, ಶೈಕ್ಷಣಿಕ ಸಂಸ್ಥೆಗಳ ನಡುವಿನ ಇಂತಹ ಸಹಕಾರವು ವಿದ್ಯಾರ್ಥಿಗಳ ಕೌಶಲ್ಯಾಭಿವೃದ್ಧಿ, ಸಂಶೋಧನೆ ಹಾಗೂ ನವೋದ್ಯಮಕ್ಕೆ ಹೊಸ ಅವಕಾಶಗಳನ್ನು ನೀಡುತ್ತದೆ ಎಂದರು.
ಮುಖ್ಯ ಮಾನವ ಸಂಪನ್ಮೂಲ ಅಧಿಕಾರಿ ಜೋಶಿ ಮ್ಯಾಥ್ಯೂ ಅವರು ಮಾತನಾಡಿ ಅವರು ಮಾತನಾಡಿ, ಈ ಒಪ್ಪಂದವು ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶಗಳನ್ನು ಸೃಷ್ಟಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಹ್ಯಾದ್ರಿ ಕಾಲೇಜಿನ ಪ್ರಾಂಶುಪಾಲ ಡಾ. ಎಸ್. ಎಸ್. ಇಂಜನಗೇರಿ ಮಾತನಾಡಿ, ಸಂಸ್ಥೆಯ ಬೆಳವಣಿಗೆಯಲ್ಲಿ ಅಧ್ಯಕ್ಷ ಮಂಜುನಾಥ ಭಂಡಾರಿ ಅವರ ನಾಯಕತ್ವ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪರಿಚಯಾತ್ಮಕ ದೃಶ್ಯ ಪ್ರದರ್ಶನ ನಡೆಯಿತು. ಆಡಳಿತಾಧಿಕಾರಿ ಕೃಷ್ಣ ಹೆಗ್ಡೆ, ಡಾ. ವಿಶಾಲ್ ಸಮರ್ಥ ಸ್ವಾಗತಿಸಿದರು. ಡಾ. ಸುಷ್ಮಾ ವಿ. ನಿರೂಪಿಸಿದರು. ವಂದನಾರ್ಪಣೆ ನೆರವೇರಿಸಲಾಯಿತು.
What do you feel about this post?
Like
Love
Happy
Haha
Sad
