ಬೆಳ್ತಂಗಡಿ: ಅಂತರ ರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ಯೋಗಾಭ್ಯಾಸ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ನ್ಯಾಚುರೋಪತಿ ವೈದ್ಯಕೀಯ ಅಧಿಕಾರಿ ಡಾ. ರಿಶಿಕಾ ರೈ ಅವರು ಮಾತನಾಡಿ, ಯೋಗವು ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಉತ್ತಮಗೊಳಿಸುವ ಮಹತ್ವದ ಸಾಧನವಾಗಿದೆ ಎಂದು ಹೇಳಿದರು. ನಿಯಮಿತ ಯೋಗಾಭ್ಯಾಸದಿಂದ ದೇಹದ ಲವಲವಿಕೆ ಹೆಚ್ಚುವುದರ ಜೊತೆಗೆ ಒತ್ತಡ ನಿಯಂತ್ರಣಕ್ಕೂ ಸಹಕಾರಿಯಾಗುತ್ತದೆ ಎಂದರು.
ಯೋಗವು ಮನಸ್ಸಿಗೆ ಶಾಂತಿ ನೀಡುವುದರೊಂದಿಗೆ ಏಕಾಗ್ರತೆಯನ್ನು ವೃದ್ಧಿಸಿ ಆರೋಗ್ಯಕರ ಜೀವನಶೈಲಿಯನ್ನು ರೂಪಿಸಲು ನೆರವಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ಅವರು ಹೇಳಿದರು.
ನಂತರ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಯೋಗಾಭ್ಯಾಸವನ್ನು ನಡೆಸಿಕೊಡಲಾಯಿತು. ವಿದ್ಯಾರ್ಥಿಗಳು ವಿವಿಧ ಆಸನಗಳು ಮತ್ತು ಉಸಿರಾಟ ಅಭ್ಯಾಸಗಳಲ್ಲಿ ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ, ಶೈಕ್ಷಣಿಕ ನಿರ್ದೇಶಕ ಗಂಗಾಧರ್ ಇ.ಎಂ., ಪ್ರಾಂಶುಪಾಲ ಬಾಲಕೃಷ್ಣ ನಾಯ್ಕ್ ಸೇರಿದಂತೆ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.
What do you feel about this post?
Like
Love
Happy
Haha
Sad
