ಕಾರವಾರ: ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನ ವೃದ್ಧಿಯೊಂದಿಗೆ ದೈಹಿಕ ಶ್ರಮ ಕಡಿಮೆಯಾಗಿದ್ದು, ಆರೋಗ್ಯದ ಕಡೆ ನಿರ್ಲಕ್ಷ್ಯ ಹೆಚ್ಚಾಗಿದೆ. ಆಧುನಿಕ ಜೀವನಶೈಲಿಯಿಂದ ಮಕ್ಕಳಲ್ಲಿಯೂ ಒತ್ತಡ, ಖಿನ್ನತೆ ಹಾಗೂ ವಿದ್ಯಾರ್ಥಿಗಳಲ್ಲಿ ಆತ್ಮಹತ್ಯೆಯಂತಹ ನಕಾರಾತ್ಮಕ ಪ್ರವೃತ್ತಿಗಳು ಕಂಡುಬರುತ್ತಿವೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಹೇಳಿದರು.
ಪೊಲೀಸ್ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಯೋಗ ಮತ್ತು ಕ್ರೀಡೆಯಿಂದ ಒತ್ತಡರಹಿತ, ಆರೋಗ್ಯಪೂರ್ಣ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಯೋಗವು ಭಾರತದ ಜಗತ್ತಿಗೆ ನೀಡಿದ ಅಮೂಲ್ಯ ಕೊಡುಗೆಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಆಕಾಶ್ ಹರಿಕಂತ್ರ ಅವರನ್ನು ಜಪಾನ್ ಪ್ರವಾಸ ಸಾಧನೆಗಾಗಿ ಸನ್ಮಾನಿಸಲಾಯಿತು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಆರೋಗ್ಯ ಇಲಾಖೆ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಇದ್ದರು.
ಕಾರ್ಯಕ್ರಮದಲ್ಲಿ ಸಾಮೂಹಿಕ ಯೋಗಾಭ್ಯಾಸ, ಪ್ರಾಣಾಯಾಮ, ಧ್ಯಾನ, ಯೋಗ ನೃತ್ಯ ಪ್ರದರ್ಶನ ಹಾಗೂ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ನಡೆಯಿತು.
What do you feel about this post?
Like
Love
Happy
Haha
Sad
