ಮಂಜನಾಡಿ ಗುಡ್ಡ ಕುಸಿತ, ಸಂತ್ರಸ್ತೆಯ ಮನೆಗೆ ಎಂಎಲ್ಸಿ ಕಿಶೋರ್ ಕುಮಾರ್ ಭೇಟಿ, ಸಾಂತ್ವನ

ಜಿಲ್ಲಾ ಸುದ್ದಿ ಉಡುಪಿ ಕಾರವಾರ ಕುಂದಾಪುರ ಪುತ್ತೂರು ಮಂಗಳೂರು ಮಹಾನಗರ ರಾಜಕೀಯ ಶಿರಸಿ
<

Spread the love

ಮಂಗಳೂರು: ಕಳೆದ ವರ್ಷ ಮಂಗಳೂರು ಸಮೀಪದ ಮಂಜನಾಡಿಯಲ್ಲಿ ಸಂಭವಿಸಿದ ಭೀಕರ ಗುಡ್ಡ ಕುಸಿತದಲ್ಲಿ ಕುಟುಂಬವನ್ನೇ ಕಳೆದುಕೊಂಡು, ಗಂಭೀರ ಸಂಕಷ್ಟದಲ್ಲಿ ಜೀವನ ಸಾಗಿಸುತ್ತಿರುವ ಅಶ್ವಿನಿ ಅವರ ಮನೆಗೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಭೇಟಿ ನೀಡಿ ಸಾಂತ್ವನ ಹೇಳಿದರು.

<

ದುರಂತದಲ್ಲಿ ತಮ್ಮ ಇಬ್ಬರು ಮಕ್ಕಳು ಮತ್ತು ಅತ್ತೆಯನ್ನು ಕಳೆದುಕೊಂಡಿದ್ದ ಅಶ್ವಿನಿ, ಸ್ವತಃ ಎರಡು ಕಾಲುಗಳನ್ನು ಕಳೆದುಕೊಂಡು, ಅವರ ಮಾವ ಒಂದು ಕಾಲನ್ನು ಕಳೆದುಕೊಂಡು ಅಂಗವೈಕಲ್ಯಕ್ಕೆ ಒಳಗಾಗಿದ್ದಾರೆ. ಈ ದುರಂತದ ಬಳಿಕ ಮನೆ ಮತ್ತು ಬದುಕು ಸಂಪೂರ್ಣ ನಾಶವಾಗಿರುವ ಹಿನ್ನೆಲೆಯಲ್ಲಿ ಅಶ್ವಿನಿ ಈಗ ಸಂಕಷ್ಟದ ಪರಿಸ್ಥಿತಿಯಲ್ಲಿ ಜೀವನ ನಡೆಸುತ್ತಿದ್ದಾರೆ.

ಮನೆಯಲ್ಲೇ ಅಶ್ವಿನಿಯನ್ನು ಭೇಟಿ ಮಾಡಿದ ಶಾಸಕರು ಅವರ ಕಣ್ಣೀರು ಒರೆಸಿ ಧೈರ್ಯ ತುಂಬಿದರು. “ನೀವು ಒಂಟಿಯಲ್ಲ, ನಿಮ್ಮ ಕುಟುಂಬದ ಜೊತೆ ನಾವು ಸದಾ ಇದ್ದೇವೆ. ಸರ್ಕಾರದಿಂದ ಸಿಗಬೇಕಾದ ಎಲ್ಲಾ ಸೌಲಭ್ಯ ಮತ್ತು ನ್ಯಾಯಕ್ಕಾಗಿ ನಿಮ್ಮ ಹೋರಾಟದಲ್ಲಿ ನಾನು ಜೊತೆಗಿರುತ್ತೇನೆ ಎಂದು ಭರವಸೆ ನೀಡಿದರು.

ಅಲ್ಲದೆ ವೈದ್ಯಕೀಯ ವೆಚ್ಚ, ಜೀವನ ನಿರ್ವಹಣೆ ಹಾಗೂ ಪುನರ್ವಸತಿ ಸಂಬಂಧಿಸಿದಂತೆ ಅಗತ್ಯ ಸೌಲಭ್ಯಗಳನ್ನು ತುರ್ತಾಗಿ ಒದಗಿಸಲು ಜಿಲ್ಲಾಡಳಿತ ಮತ್ತು ಸಂಬಂಧಿತ ಅಧಿಕಾರಿಗಳೊಂದಿಗೆ ಮಾತನಾಡುವುದಾಗಿ ಅವರು ತಿಳಿಸಿದರು.

ಮಂಡಲ ಅಧ್ಯಕ್ಷ ಜಗದೀಶ್ ಕುವತ್ತಬೈಲ್, ಜಿಲ್ಲಾ ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ದಯಾನಂದ ತೊಕ್ಕೊಟ್ಟು ಹಾಗೂ ಮೋಹನ್ ರಾಜ್ ಕೆ. ಆರ್., ಯುವಮೋರ್ಚಾ ಅಧ್ಯಕ್ಷ ಮುರಳಿ ಕೊಣಾಜೆ, ರೈತಮೋರ್ಚಾ ಅಧ್ಯಕ್ಷ ಪದ್ಮನಾಭ ಶೆಟ್ಟಿ, ಮಂಡಲ ಕೋಶಾಧಿಕಾರಿ ಸುಮಲತಾ ಕೊಣಾಜೆ, ಶಕ್ತಿ ಕೇಂದ್ರ ಪ್ರಮುಖ ಸುಧಾಕರ ಗಟ್ಟಿ ಹಾಗೂ ಇತರರು ಇದ್ದರು.

ಮುಖ್ಯಾಂಶಗಳು

ಮಂಜನಾಡಿ ಗುಡ್ಡ ಕುಸಿತ ಸಂತ್ರಸ್ತೆ ಅಶ್ವಿನಿ ಮನೆಗೆ ಶಾಸಕ ಭೇಟಿ
ಕುಟುಂಬ ಸದಸ್ಯರು ಮತ್ತು ಅಂಗವೈಕಲ್ಯದಿಂದ ತೀವ್ರ ಸಂಕಷ್ಟ
ಸರ್ಕಾರದಿಂದ ಸಂಪೂರ್ಣ ಬೆಂಬಲದ ಭರವಸೆ
ಪರಿಹಾರ ಮತ್ತು ಪುನರ್ವಸತಿಗೆ ತ್ವರಿತ ಕ್ರಮಕ್ಕೆ ಸೂಚನೆ

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *