ಕಾರವಾರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಭಾರ ನಿರ್ವಹಿಸುತ್ತಿರುವ ಕುಮಾರ್ ಎನ್ ಅವರು ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಕಲ್ಯಾಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಿದ್ದಾಪುರ ತಾಲೂಕಿನ ಪ್ರೌಢಶಾಲೆಯೊಂದರಲ್ಲಿ ಮಕ್ಕಳ ಮೇಲೆ ದೌರ್ಜನ್ಯ ನಡೆದಿರುವ ಕುರಿತು ದೂರು ಬಂದ ಹಿನ್ನೆಲೆಯಲ್ಲಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾನಸೂರು ವಸತಿ ಶಾಲೆಯಲ್ಲಿ ವಿದ್ಯಾರ್ಥಿಯ ಆತ್ಮಹತ್ಯೆ ಪ್ರಕರಣಕ್ಕೂ ಸಂಬಂಧಿಸಿದಂತೆ ಸ್ಥಳ ಪರಿಶೀಲನೆ ನಡೆಸಿ ಸಂಬಂಧಿತ ಮಾಹಿತಿ ಸಂಗ್ರಹಿಸಿದರು.
ಇಲಾಖೆಯ ಆಡಳಿತಾತ್ಮಕ ಜವಾಬ್ದಾರಿಗಳ ಜತೆಗೆ ಮಕ್ಕಳ ರಕ್ಷಣೆ ಮತ್ತು ಪೋಷಣೆ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ, ಪ್ರಕರಣಗಳ ಗಂಭೀರತೆಯನ್ನು ಅರಿತು ಖುದ್ದಾಗಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿರುವುದು ಗಮನಾರ್ಹ ಆಗಿದೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ ಕುರಿತ ದೂರುಗಳಿಗೆ ತ್ವರಿತವಾಗಿ ಸ್ಪಂದಿಸುವ ಮೂಲಕ ಮಕ್ಕಳ ಹಿತಾಸಕ್ತಿಗೆ ಮೊದಲ ಆದ್ಯತೆ ನೀಡುತ್ತಿದ್ದಾರೆ.
What do you feel about this post?
Like
Love
Happy
Haha
Sad



