ಬೆಂಗಳೂರು: ರಾಜ್ಯ ಸರಕಾರವು ಸ್ಥಳ ನಿರೀಕ್ಷೆಯಲ್ಲಿದ್ದ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಕರ್ನಾಟಕ ಗಣಿಗಾರಿಕೆ ಪರಿಸರ ಮರುಸ್ಥಾಪನಾ ನಿಗಮ (ಕೆಎಂಇಆರ್‍ಸಿ)ದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಅಭಿರಾಮ್ ಜಿ. ಶಂಕರ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಅಭಿರಾಮ್ ಜಿ. ಶಂಕರ್ ಅವರನ್ನು ಐಎಫ್‍ಎಸ್ ಅಧಿಕಾರಿ ಡಾ. ಸಂಜಯ್ ಎಸ್.ಬಿಜ್ಜೂರ್ ಅವರಿಂದ ತೆರವು ಆಗುತ್ತಿರುವ ಸ್ಥಾನಕ್ಕೆ ನಿಯೋಜನೆ ಮಾಡಲಾಗಿದೆ.
ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ(ಐಟಿ-ಬಿಟಿ) ಇಲಾಖೆಯ ನಿರ್ದೇಶಕರನ್ನಾಗಿ ಡಾ.ಅವಿನಾಶ್ ಮೆನನ್ ಅವರನ್ನು ನೇಮಿಸಿದ್ದು, ಇದರ ಜತೆಗೆ ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ (ಕಿಯೋನಿಕ್ಸ್)ದ ವ್ಯವಸ್ಥಾಪಕ ನಿರ್ದೇಶಕ ಹುದ್ದೆಯ ಹೆಚ್ಚುವರಿ ಪ್ರಭಾರ ನೀಡಿ ಆದೇಶ ಹೊರಡಿಸಲಾಗಿದೆ.
ಬೆಂಗಳೂರಿನ ಕೃಷಿ ಮಾರುಕಟ್ಟೆ ಇಲಾಖೆ ನಿರ್ದೇಶಕರನ್ನಾಗಿ ಯೋಗೀಶ್ ಎ. ಎಂ. ಅವರನ್ನು ನೇಮಕ ಮಾಡಿದ್ದು, ಈ ವರೆಗೆ ಈ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆಯಲ್ಲಿ ಇದ್ದ ಐಎಎಸ್ ಅಧಿಕಾರಿ ಪ್ರಸನ್ನ ಎಚ್. ಅವರನ್ನು ಈ ಜವಾಬ್ದಾರಿಯಿಂದ ಬಿಡುಗಡೆ ಮಾಡಲಾಗಿದೆ.
ಬೆಂಗಳೂರಿನ ಗ್ರಾಮೀಣಾಭಿವೃದ್ಧಿ ಆಯುಕ್ತರನ್ನಾಗಿ ದಿವ್ಯಾ ಪ್ರಭು ಜಿ. ಆರ್.ಜೆ. ಅವರನ್ನು ನೇಮಿಸಿದ್ದು, ಈ ವರೆಗೆ ಈ ಹುದ್ದೆಯ ಹೆಚ್ಚುವರಿ ಪ್ರಭಾರದಲ್ಲಿದ್ದ ಡಾ.ಅರುಂಧತಿ ಚಂದ್ರಶೇಖರ್ ಅವರನ್ನು ತಕ್ಷಣದಿಂದಲೇ ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ.
What do you feel about this post?
Like
Love
Happy
Haha
Sad



