ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ನಿಂದಾಗಿ ಜಿಲ್ಲೆಯ ಕಾರವಾರ ತಾಲೂಕಿನಲ್ಲಿ ಗುರುವಾರ(ಜುಲೈ 2) ಬೆಳಗ್ಗೆಯಿಂದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರತಿಕೂಲ ಹವಾಮಾನ ಮತ್ತು ನಿರಂತರ ಮಳೆಯ ಕಾರಣ ವಿದ್ಯಾರ್ಥಿಗಳ ಸಂಚಾರಕ್ಕೆ ತೊಂದರೆ ಆಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. ಜುಲೈ 2 ರಂದು ನೀಡಿರುವ ರಜೆಯಿಂದ ಉಂಟಾಗುವ ಕಲಿಕಾ ದಿನದ ಕೊರತೆಯನ್ನು ಮುಂದಿನ ದಿನಗಳಲ್ಲಿ ಹೆಚ್ಚುವರಿ ಶಾಲಾ ಕಾರ್ಯ ದಿನಗಳನ್ನು ನಡೆಸುವ ಮೂಲಕ ಸರಿದೂಗಿಸಿಕೊಳ್ಳುವಂತೆ ಶಾಲಾ ಮುಖ್ಯಸ್ಥರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
What do you feel about this post?
100%
Like
0%
Love
0%
Happy
0%
Haha
0%
Sad
0%



