ದ. ಕ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್: ಶಾಲೆ- ಪಿಯು ಕಾಲೇಜುಗಳಿಗೆ 3 ರಂದು ರಜೆ: ಡಿಸಿ ದರ್ಶನ್ 

ಜಿಲ್ಲಾ ಸುದ್ದಿ ಪುತ್ತೂರು ಮಂಗಳೂರು ಮಳೆ ಸುದ್ದಿ ಶಿಕ್ಷಣ

Spread the love

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರೆಯುವ ಸಾಧ್ಯತೆಯಿದ್ದು, ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜುಲೈ 3 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಆದೇಶ ಹೊರಡಿಸಿದ್ದಾರೆ.

<

ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಈ ಕುರಿತು ಆದೇಶ ಹೊರಡಿಸಿದ್ದು, ರಜೆ ಘೋಷಿಸಿದ್ದರೂ ಯಾವುದೇ ಶಿಕ್ಷಣ ಸಂಸ್ಥೆಗಳು ತರಗತಿಗಳನ್ನು ನಡೆಸಬಾರದು ಎಂದು ಸೂಚಿಸಿದೆ. ಆದೇಶ ಉಲ್ಲಂಘಿಸಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಮಳೆ ತೀವ್ರಗೊಳ್ಳುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ನದಿಗಳು, ಕೆರೆಗಳು, ತಗ್ಗು ಪ್ರದೇಶಗಳು, ಸಮುದ್ರ ತೀರ ಹಾಗೂ ಗುಡ್ಡಗಾಡು ಪ್ರದೇಶಗಳಿಗೆ ತೆರಳದಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಪ್ರವಾಸಿಗರು ಸಹ ನದಿ ಮತ್ತು ಸಮುದ್ರ ತೀರಗಳಿಗೆ ಭೇಟಿ ನೀಡದಂತೆ ಸೂಚನೆ ನೀಡಲಾಗಿದೆ.

ಇದೇ ವೇಳೆ ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನದಲ್ಲೇ ಉಳಿದು ವಿಪತ್ತು ನಿರ್ವಹಣೆಗೆ ಸಜ್ಜಾಗಿರಬೇಕು. ಪ್ರತಿ ತಾಲೂಕಿನಲ್ಲೂ ಕಾಳಜಿ ಕೇಂದ್ರಗಳನ್ನು ತೆರೆಯಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *