ಮಳೆ ಹಾನಿ ಪರಿಶೀಲನೆಗೆ ಕಾರವಾರಕ್ಕೆ ಸಚಿವ ಯು.ಟಿ. ಖಾದರ್, ಅಧಿಕಾರಿಗಳ ಜತೆಗೆ ಪ್ರಗತಿ ಪರಿಶೀಲನೆ

ಜಿಲ್ಲಾ ಸುದ್ದಿ ಕಾರವಾರ ಮಳೆ ಸುದ್ದಿ ಶಿರಸಿ

Spread the love

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಉಂಟಾಗಿರುವ ಹಾನಿ ಹಾಗೂ ಪರಿಹಾರ ಕಾರ್ಯಗಳ ಪ್ರಗತಿ ಪರಿಶೀಲನೆ ನಡೆಸಲು ಆರೋಗ್ಯ ಸಚಿವ ಹಾಗೂ ಉತ್ತರ ಕನ್ನಡ ಪ್ರಕೃತಿ ವಿಕೋಪ ಮೇಲುಸ್ತುವಾರಿ ಯು.ಟಿ. ಖಾದರ್ ಅವರು ಶನಿವಾರ ಕಾರವಾರಕ್ಕೆ ಭೇಟಿ ನೀಡಲಿದ್ದಾರೆ.

<

ಮಂಗಳೂರಿನಿಂದ ಕಾರವಾರಕ್ಕೆ ಬರಲಿರುವ ಅವರು ‌ಬೆಳಿಗ್ಗೆ 10.30 ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.

ಸಭೆಯಲ್ಲಿ ಮಳೆಯಿಂದ ಉಂಟಾದ ಹಾನಿಯ ಸಂಪೂರ್ಣ ವಿವರ, ಪರಿಹಾರ ಮತ್ತು ಪುನರ್ವಸತಿ ಕಾರ್ಯಗಳ ಪ್ರಗತಿ, ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಸಾರ್ವಜನಿಕರಿಗೆ ಒದಗಿಸಲಾಗುತ್ತಿರುವ ಅಗತ್ಯ ಸೌಲಭ್ಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದಾರೆ. ಅಲ್ಲದೆ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಅಗತ್ಯ ನಿರ್ದೇಶನಗಳನ್ನು ನೀಡಲಿದ್ದಾರೆ.

ಜಿಲ್ಲೆಯಲ್ಲಿ ಮಳೆಯ ತೀವ್ರತೆ ಮುಂದುವರೆದಿರುವ ಹಿನ್ನೆಲೆಯಲ್ಲಿ ಪ್ರಸ್ತುತ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಸುವ ಉದ್ದೇಶದಿಂದ ಈ ಸಭೆ ಆಯೋಜಿಸಲಾಗಿದೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ಕೈಗೊಂಡಿರುವ ಕ್ರಮಗಳು ಹಾಗೂ ಮುಂದಿನ ಕಾರ್ಯತಂತ್ರದ ಕುರಿತು ಸಚಿವರು ಅಧಿಕಾರಿಗಳೊಂದಿಗೆ ಚರ್ಚಿಸಲಿದ್ದಾರೆ.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *