ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾ ಕರಿದೇವಸ್ಥಾನದಿಂದ ಅರಗಾ ಮಹಾದೇವಸ್ಥಾನ ಕ್ರಾಸ್‌ವರೆಗೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಜುಲೈ 4 ರಿಂದ ಮಳೆಗಾಲ ಮುಗಿಯುವವರೆಗೆ ಏಕಮುಖ ಸಂಚಾರ ವ್ಯವಸ್ಥೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಆದೇಶ ಹೊರಡಿಸಿದ್ದಾರೆ.
ಮಳೆಗಾಲದಲ್ಲಿ ಗುಡ್ಡ ಪ್ರದೇಶದಿಂದ ನೀರಿನ ರಭಸಕ್ಕೆ ಕಲ್ಲು ಹಾಗೂ ಮಣ್ಣು ರಾಷ್ಟ್ರೀಯ ಹೆದ್ದಾರಿಯ ಮೇಲೆ ಕುಸಿಯುವ ಸಾಧ್ಯತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಈ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಗುಡ್ಡ ಕುಸಿತದಿಂದ ವಾಹನ ಸವಾರರು ಹಾಗೂ ಪ್ರಯಾಣಿಕರ ಸುರಕ್ಷತೆಗೆ ಅಪಾಯ ಉಂಟಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಬಿಣಗಾ ಕರಿದೇವಸ್ಥಾನದಿಂದ ಅರಗಾ ಗ್ರಾಮದವರೆಗೆ ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ಏಕಮುಖ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಈ ವ್ಯವಸ್ಥೆ ಜುಲೈ 4 ರಿಂದ ಮಳೆಗಾಲ ಅಂತ್ಯಗೊಳ್ಳುವವರೆಗೆ ಜಾರಿಯಲ್ಲಿರಲಿದೆ. ಜಿಲ್ಲಾಡಳಿತವು ವಾಹನ ಸವಾರರು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಪೊಲೀಸ್ ಹಾಗೂ ಸಂಬಂಧಿತ ಇಲಾಖೆಗಳ ಸೂಚನೆಗಳನ್ನು ಅನುಸರಿಸುವಂತೆ ತಿಳಿಸಿದ್ದಾರೆ.
What do you feel about this post?
Like
Love
Happy
Haha
Sad



