ಕಾರವಾರ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಸ್ವೀಪ್ ಸಮಿತಿ ಉತ್ತರ ಕನ್ನಡ ಹಾಗೂ ನಗರಸಭೆ ಕಾರವಾರದ ವತಿಯಿಂದ, ನಗರಸಭೆ ಆವರಣದಲ್ಲಿ ಸೋಮವಾರ ಸಂಜೆ ಆಯೋಜಿಸಿದ್ದ ಪಂಜಿನ ಮೆರವಣಿಗೆ ಕಾರ್ಯಕ್ರಮವನ್ನು ಕಾರವಾರ ನಗರಸಭೆಯ ಪೌರಾಯುಕ್ತ ಜಗದೀಶ್ ಹುಲಗಜ್ಜಿ ಚಾಲನೆ ನೀಡಿದರು.

ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್ ಇದ್ದರು. ನಗರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪಂಜಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ನಗರಸಭೆ ಆವರಣದಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಪಂಜಿನ ಮೆರವಣಿಗೆ ನಡೆಯಿತು.
What do you feel about this post?
0%
Like
0%
Love
0%
Happy
0%
Haha
0%
Sad
0%



