ಯಲ್ಲಾಫುರ: ಕ್ರೂಸರ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಅಪಘಾತದಲ್ಲಿ 6 ಜನ ಮೃತಪಟ್ಟಿದ್ದು, ಮೂರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಯಲ್ಲಾಪುರ ತಾಲೂಕಿನ ಅರ್ತಿಬೈಲ್ ಬಳಿ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಗುರುವಾರ ನಸುಕಿನ ವೇಳೆ ಸಂಭವಿಸಿದೆ.
ಧಾರವಾಡ ಮೂಲದ ಬಸವರಾಜ, ಆಭಿಷೇಕ, ಅಕ್ಷಯ, ಅಭಿಷೇಕ, ಸಂಜೀವ್, ಮಂಜುನಾಥ ಮತ್ತು ಇನ್ನೊಬ್ಬ ವ್ಯಕ್ತಿ ಮೃತಪಟ್ಟಿದ್ದು ಶಿವರಾಜ, ಚೆನ್ನ ಬಸು, ಸಚಿನ್ ಎಂಬುವವರು ಗಾಯಗೊಂಡಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಧಾರವಾಡದಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಪ್ರವಾಸಿಗರ ಕ್ರೂಸರ್ ಯಲ್ಲಾಪುರ ಅರ್ತಿಬೈಲ್ ಬಳಿ ಲಾರಿಗೆ ಡಿಕ್ಕಿ ಹೊಡೆದು ಸಂಪೂರ್ಣ ನುಜ್ಜ್ಜುಗುಜ್ಜಾಗಿದೆ. ಯಲ್ಲಾಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
What do you feel about this post?
0%
Like
0%
Love
0%
Happy
0%
Haha
0%
Sad
0%



