ಮಕ್ಕಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ತಾಲ್ಲೂಕು ಪಂಚಾಯಿತಿ ಇಒ ಭಾರತಿ ಎನ್

ಜಿಲ್ಲಾ ಸುದ್ದಿ ಕಾರವಾರ ಶಿಕ್ಷಣ ಶಿರಸಿ

Spread the love

ಕಾರವಾರ: ಮಕ್ಕಳು ಈ ದೇಶದ ಸಂಪತ್ತು. ಮಕ್ಕಳನ್ನು ಕಾಪಾಡುವ ಜವಾಬ್ದಾರಿ ಇಡೀ ಸಮಾಜದ ಮೇಲಿದೆ. ಮಕ್ಕಳನ್ನು ಕಾಪಾಡುವುದು ಅಥವಾ ರಕ್ಷಣೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಎಂದು ಜೋಯಿಡಾ ತಾ.ಪಂ. ಕಾರ್ಯನಿರ್ವಣಾಧಿಕಾರಿ ಭಾರತಿ ಎನ್ ಹೇಳಿದರು.

<

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ಘಟಕ ಹಾಗೂ ಸಖಿ ಆಶ್ರಯದಲ್ಲಿ ಜೋಯಿಡಾದ ಮೊರಾರ್ಜಿ ವಸತಿ ಶಾಲೆಯಲ್ಲಿ ಮಕ್ಕಳಿಗಾಗಿ ಆಯೋಜಿಸಲಾದ , ಸಾಮಾಜಿಕ ಪಿಡುಗು ಹಾಗೂ ಪೋಕ್ಸೋ ಕಾಯ್ದೆ, ಬಾಲ ನ್ಯಾಯ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಬಾಲ ಕಾರ್ಮಿಕ ನಿಷೇಧ ಕಾಯ್ದೆ ವಿಷಯಗಳ ಕುರಿತು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಸ್.ಎನ್ ಕೊರವರ್ ಮಾತನಾಡಿ, ಮಕ್ಕಳ ಕಾನೂನು, ಮಕ್ಕಳಿಗಿರುವ ಸೌಲಭ್ಯಗಳು ಸಿಗುವಂತಾಗಬೇಕು ಮಕ್ಕಳ ಹಕ್ಕುಗಳು ಉಲ್ಲಂಘನೆ ಆಗಬಾರದು. ಮಕ್ಕಳ ರಕ್ಷಣೆ ಎಲ್ಲಾ ಇಲಾಖೆಯ ಜವಾಬ್ದಾರಿ ಎಂದು ತಿಳಿಸಿದರು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಮಹೇಶ್ ಜಿ , ಮಕ್ಕಳ ಹಕ್ಕುಗಳು, ಪೋಕ್ಸೋ ಕಾಯ್ದೆ, ಬಾಲ ನ್ಯಾಯ ಕಾಯ್ದೆ, ಬಾಲ್ಯ ವಿವಾಹದ ನಿಷೇಧ ಕಾಯ್ದೆಗಳ ಬಗ್ಗೆ ಮತ್ತು ಸಖಿ ಕೇಂದ್ರದ ಆಡಳಿತ ಅಧಿಕಾರಿ ಮಂಜುಳಾ ಪಾಟೀಲ್ ಸಖಿ ಕೇಂದ್ರದಲ್ಲಿ ದೊರೆಯುವ ಸೌಲಭ್ಯಗಳ ಬಗ್ಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕ ಗಿರೀಶ್ ಕುಮಾರ್ ಹಿರೇಮಠ, ಶಾಲೆಯ ಶಿಕ್ಷಕವೃಂದ, ವಿದ್ಯಾರ್ಥಿಗಳು ಹಾಜರಿದ್ದರು. ಮಕ್ಕಳಿಗೆ ಬಾಲ ನ್ಯಾಯ ಕಾಯ್ದೆಯ ಕಿರು ಪುಸ್ತಗಳನ್ನು ವಿತರಿಸಲಾಯಿತು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *