ಉ.ಕ ಜಿಲ್ಲೆಯಾದ್ಯಂತ 12,28,857 ಎನ್ಯುಮರೇಷನ್ ಫಾರ್ಮ್ ವಿತರಣೆ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ

ಜಿಲ್ಲಾ ಸುದ್ದಿ ಕಾರವಾರ ಶಿರಸಿ

Spread the love

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026 ಪ್ರಕ್ರಿಯೆ ಚುರುಕಿನಿಂದ ಸಾಗಿದ್ದು, ಜಿಲ್ಲೆಯಲ್ಲಿ ಒಟ್ಟು 12,30,037 ಮತದಾರರಿದ್ದು, ಇದುವರೆಗೂ ಜಿಲ್ಲೆಯಾದ್ಯಂತ ಒಟ್ಟು 12,28,857 ಎನ್ಯುಮರೇಷನ್ ಫಾರ್ಮ್ ಗಳನ್ನು ವಿತರಿಸಲಾಗಿದ್ದು, 2,29,171 ಫಾರ್ಮ್ಗಳನ್ನು ಗಣಕೀಕರಣ ಗೊಳಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ತಿಳಿಸಿದ್ದಾರೆ.

ಈವರೆಗಿನ ಮನೆ ಮನೆ ಭೇಟಿಯ ಸಂದರ್ಭದಲ್ಲಿ ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಪ್ರಕರಣಗಳಿಗೆ ಸಂಬ0ಧಿಸಿದಂತೆ ಒಟ್ಟು 2520 ಮತದಾರರನ್ನು ಗುರುತಿಸಲಾಗಿದೆ. ಇದರಲ್ಲಿ 402 ಶಾಶ್ವತ ವಲಸೆ ಹಾಗೂ 1907 ಮರಣ ಹೊಂದಿದ ಪ್ರಕರಣಗಳು, 191 ದ್ವಿಪ್ರತಿಗಳು ಸೇರಿವೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *