ಹಾಡು ನಿಲ್ಲಿಸಿದ ಕೋಗಿಲೆ ಕಂಠದ ಗಾಯಕಿ ಎಸ್ . ಜಾನಕಿ ನಿಧನ

ಜಿಲ್ಲಾ ಸುದ್ದಿ ಉಡುಪಿ ಕಾರವಾರ ಕುಂದಾಪುರ ದೇಶ ವಿದೇಶ ಪುತ್ತೂರು ಮಂಗಳೂರು ರಾಜ್ಯ ಶಿರಸಿ ಸಿನಿಮಾ

Spread the love

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್‌.ಜಾನಕಿ (88) ಅವರು ಶನಿವಾರ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮೈಸೂರಿನ ಕುವೆಂಪುನಗರದಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಧ್ಯಾಹ್ನ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಬಹುಭಾಷಾ ಗಾಯಕಿ ಎಸ್. ಜಾನಕಿ ಅವರು ಮೈಸೂರಿನ ಬನ್ನೂರು ರಸ್ತೆಯ ಫಾರ್ಮ್ ಹೌಸ್​ನಲ್ಲಿ ಹಲವು ವರ್ಷಗಳಿಂದ ವಾಸವಾಗಿದ್ದರು. ಈಚೆಗೆ ಬೋಗಾದಿ ನಗರದಲ್ಲಿ ವಾಸವಾಗಿದ್ದರು. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಶನಿವಾರ ಮಧ್ಯಾಹ್ನ ಮೈಸೂರಿನ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದ, ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಆಸ್ಪತ್ರೆಯ ತಿಳಿಸಿವೆ.

Leave a Reply

Your email address will not be published. Required fields are marked *