ಮೂಡುಬಿದಿರೆ: ಉದ್ಯಮದಲ್ಲಿ ಯಶಸ್ಸು ಸಾಧಿಸಲು ಕೇವಲ ಹೊಸ ಕಲ್ಪನೆಗಳನ್ನು ಹೊಂದಿರುವುದಷ್ಟೇ ಸಾಲದು; ಅವುಗಳನ್ನು ಕಾರ್ಯರೂಪಕ್ಕೆ ತರುವ ಸಮರ್ಥ ತಂತ್ರ, ದೃಢ ಪ್ರಕ್ರಿಯೆ, ನಿರಂತರ ಪ್ರಯತ್ನ ಮತ್ತು ಶಿಸ್ತು ಅಗತ್ಯ ಎಂದು ಖ್ಯಾತ ಮ್ಯಾನೇಜ್‌ಮೆಂಟ್ ಕನ್ಸಲ್ಟೆಂಟ್ ಹಾಗೂ ಮಾಸ್ಟರ್‌ಚೆಫ್ ಇಂಡಿಯಾ ಸೆಮಿಫೈನಲಿಸ್ಟ್ ವೇಣು ಶರ್ಮಾ ಹೇಳಿದರು.
ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದ ಎಂಬಿಎ ವಿಭಾಗ ಆಯೋಜಿಸಿದ್ದ ‘ಪರಿಣಾಮಕಾರಿ ಕಾರ್ಯತಂತ್ರ ರೂಪಿಸುವುವ ಬಗೆ’ ವಿಶೇಷ ತರಬೇತಿ ಕರ‍್ಯಗಾರದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸು ಸಾಧಿಸಲು ಹೊಸ ಕಲ್ಪನೆಗಳಿಗಿಂತ ಅವುಗಳನ್ನು ಸರಿಯಾದ ತಂತ್ರದ ಮೂಲಕ ಅನುಷ್ಠಾನಗೊಳಿಸುವ ಸಾಮರ್ಥ್ಯವೇ ಪ್ರಮುಖವಾಗಿದೆ. ಉತ್ತಮ ಯೋಜನೆ, ನಿರಂತರ ಸುಧಾರಣೆ ಹಾಗೂ ಶಿಸ್ತಿನ ಕಾರ್ಯಪದ್ಧತಿ ಯಾವುದೇ ಸಂಸ್ಥೆಯ ಬೆಳವಣಿಗೆಗೆ ಬಲವಾದ ಅಡಿಪಾಯವಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮಾಸ್ಟರ್‌ಚೆಫ್ ಇಂಡಿಯಾ ಸೆಮಿಫೈನಲಿಸ್ಟ್ ಆಗಿ ರಾಷ್ಟ್ರಮಟ್ಟದಲ್ಲಿ ಸಾಧನೆಗೈದ ವೇಣು ಶರ್ಮಾರವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.
ಎಂಬಿಎ ವಿಭಾಗದ ಮುಖ್ಯಸ್ಥೆ ಪ್ರಿಯಾ ಸಿಕ್ವೇರಾ ಉಪಸ್ಥಿತರಿದ್ದರು. ಹೃಷಿಕಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಅಮಾನ್ ಕಾರ್ಯಕ್ರಮವನ್ನು ಸಂಯೋಜಿಸಿದರು.

