ಮುಂಡಗೋಡ: ಲಾರಿ, ಕೆಎಸ್ ಆರ್ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ, 30ಕ್ಕೂ ಹೆಚ್ಚು ಮಂದಿಗೆ ಗಾಯ, ಐದು ಮಂದಿ ಹುಬ್ಬಳ್ಳಿ ಕಿಮ್ಸ್ ಗೆ ದಾಖಲು

ಅಪರಾಧ ಕಾರವಾರ ಜಿಲ್ಲಾ ಸುದ್ದಿ ರಾಜ್ಯ ಶಿರಸಿ

Spread the love

ಮುಂಡಗೋಡ: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಕಾವಲಕೊಪ್ಪ ಗ್ರಾಮದ ಶರೀಫಜ್ಜನ ದೇವಸ್ಥಾನದ ಸಮೀಪ ಕೆಸ್ ಆರ್ ಟಿಸಿ ಬಸ್ ಮತ್ತು ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ 30 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಐದು ಮಂದಿಯ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ.

ಹಾನಗಲ್ಲನಿಂದ ಮುಂಡಗೋಡ ಕಡೆಗೆ ಬರುತ್ತಿದ್ದ ಬಸ್‌ಗೆ, ಮುಂಡಗೋಡಿನಿಂದ ಸಿರಸಿ ಕಡೆಗೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬಸ್‌ನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದಾರೆ.

ಪೊಲೀಸರು ಹಾಗೂ ಸ್ಥಳೀಯರು ಘಟನಾ ಸ್ಥಳಕ್ಕೆ ದೌಡಾಯಿಸಿ ಬಂದು ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಮುಂಡಗೋಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಐದು ಮಂದಿಯನ್ನು ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ. ಮುಂಡಗೋಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *