ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶ: ತಡೆಗೆ ಸುಪ್ರೀಂ ನಿರಾಕರಣೆ, ಮತ್ತೇ ಹಿನ್ನಡೆ

ಜಿಲ್ಲಾ ಸುದ್ದಿ ಉಡುಪಿ ಕಾರವಾರ ಕುಂದಾಪುರ ಪುತ್ತೂರು ಮಂಗಳೂರು ಮಹಾನಗರ ರಾಜ್ಯ ಶಿರಸಿ

Spread the love

ಬೆಳ್ತಂಗಡಿ : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ, ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಗಡೀಪಾರು ಆದೇಶ ಶಿಕ್ಷೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಅಪರಾಧ ಹಿನ್ನೆಲೆಯುಳ್ಳ ಕಾರಣಕ್ಕೆ ಮತ್ತು ನಿರಂತರವಾಗಿ ಸಮಾಜದ ಸ್ವಾಸ್ಥಕ್ಕೆ ಧಕ್ಕೆ ತರುವ ಆರೋಪದ ಮೇಲೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ ಆದೇಶ ಹೊರಡಿಸಿದ್ದರು.

ಗಡೀಪಾರು ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯನ್ನು ಮಾನ್ಯ ಮಾಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಹೈಕೋರ್ಟ್ ಕೂಡ ಈ ಹಿಂದೆ ಗಡೀಪಾರು ಆದೇಶಕ್ಕೆ ತಡೆ ನೀಡಲು ನಿರಾಕರಿಸಿತ್ತು.

Leave a Reply

Your email address will not be published. Required fields are marked *