ಎನ್‌ಎಂಸಿ ಅನುಮತಿ: ಆಳ್ವಾಸ್ ವೈದ್ಯಕೀಯ ಕಾಲೇಜಿನಲ್ಲಿ 150 ಎಂಬಿಬಿಎಸ್ ಸೀಟುಗಳಿಗೆ ಹಸಿರು ನಿಶಾನೆ, ಕರಾವಳಿಯ ವೈದ್ಯಕೀಯ ಶಿಕ್ಷಣಕ್ಕೆ ಹೊಸ ಮೈಲುಗಲ್ಲು: ಡಾ. ಆಳ್ವ

ಆರೋಗ್ಯ ಉಡುಪಿ ಕಾರವಾರ ಕುಂದಾಪುರ ಜಿಲ್ಲಾ ಸುದ್ದಿ ಪುತ್ತೂರು ಮಂಗಳೂರು ಮಹಾನಗರ ರಾಜ್ಯ ಶಿಕ್ಷಣ ಶಿರಸಿ

Spread the love

ಮೂಡುಬಿದಿರೆ: ಕರಾವಳಿ ಭಾಗದ ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಮಹತ್ವದ ಬೆಳವಣಿಗೆಯಾಗಿ, ಮೂಡುಬಿದಿರೆಯ ಮಿಜಾರಿನಲ್ಲಿರುವ ಆಳ್ವಾಸ್ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರಕ್ಕೆ 2026–27ನೇ ಶೈಕ್ಷಣಿಕ ವರ್ಷದಿಂದ 150 ಎಂಬಿಬಿಎಸ್ ವಿದ್ಯಾರ್ಥಿಗಳ ಪ್ರವೇಶಕ್ಕೆ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ಅಧಿಕೃತ ಅನುಮೋದನೆ ನೀಡಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರು ತಿಳಿಸಿದ್ದಾರೆ.

ಈ ಅನುಮೋದನೆಯೊಂದಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಬಹುಕಾಲದ ಮಹತ್ವಾಕಾಂಕ್ಷೆಯ ವೈದ್ಯಕೀಯ ಕಾಲೇಜು ಕಾರ್ಯರೂಪಕ್ಕೆ ಬರುತ್ತಿದ್ದು, ಮೊದಲ ವರ್ಷದಲ್ಲೇ 150 ವಿದ್ಯಾರ್ಥಿಗಳಿಗೆ ಎಂಬಿಬಿಎಸ್ ವ್ಯಾಸಂಗಕ್ಕೆ ಅವಕಾಶ ದೊರೆಯಲಿದೆ. ಇದರಿಂದ ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ವೈದ್ಯಕೀಯ ಶಿಕ್ಷಣ ಆಕಾಂಕ್ಷಿಗಳಿಗೆ ಹೊಸ ಅವಕಾಶಗಳು ಲಭಿಸಲಿವೆ ಎಂದು ತಿಳಿಸಿದ್ದಾರೆ.

ಅತ್ಯಾಧುನಿಕ ಮೂಲಸೌಕರ್ಯ, ಸುಸಜ್ಜಿತ ಪ್ರಯೋಗಾಲಯಗಳು, ಬೋಧನಾ ಆಸ್ಪತ್ರೆ, ಆಧುನಿಕ ವೈದ್ಯಕೀಯ ಉಪಕರಣಗಳು ಹಾಗೂ ಅನುಭವಿ ಬೋಧಕ ವರ್ಗದೊಂದಿಗೆ ಗುಣಮಟ್ಟದ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸೇವೆ ಒದಗಿಸಲು ಕಾಲೇಜು ಸಜ್ಜಾಗಿದೆ. ವೈದ್ಯಕೀಯ ಶಿಕ್ಷಣದ ಜೊತೆಗೆ ಸಂಶೋಧನೆಗೂ ಆದ್ಯತೆ ನೀಡುವ ಉದ್ದೇಶವನ್ನು ಸಂಸ್ಥೆ ಹೊಂದಿದೆ ಎಂದು ತಿಳಿಸಿದ್ದಾರೆ.

ಅವರು ರಾಷ್ಟ್ರೀಯ ವೈದ್ಯಕೀಯ ಆಯೋಗ, ಕೇಂದ್ರ ಸರ್ಕಾರ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಕರ್ನಾಟಕ ಸರ್ಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಇಲಾಖೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಪಯಣದಲ್ಲಿ ವೈದ್ಯಕೀಯ ಕಾಲೇಜಿನ ಆರಂಭವು ಹೊಸ ಅಧ್ಯಾಯವಾಗಿದ್ದು, ಭವಿಷ್ಯದ ಸಮರ್ಥ ವೈದ್ಯರನ್ನು ರೂಪಿಸುವುದರ ಜೊತೆಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ಸಮಾಜಕ್ಕೆ ಒದಗಿಸುವಲ್ಲಿ ಈ ಸಂಸ್ಥೆ ಮಹತ್ವದ ಪಾತ್ರ ವಹಿಸಲಿದೆ ಎಂದು ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *