ಭಾರಿ ಮಳೆ: ಅಂಕೋಲಾ ತಾಲೂಕಿನ ಎಲ್ಲಾ ಶಾಲೆಗಳಿಗೆ ಇಂದು ರಜೆ ಘೋಷಣೆ

ಜಿಲ್ಲಾ ಸುದ್ದಿ ಕಾರವಾರ ಮಳೆ ಸುದ್ದಿ ಶಿರಸಿ

Spread the love

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನಾದ್ಯಂತ ಭಾರಿ ಮಳೆ ನಿರಂತರವಾಗಿ ಸುರಿಯುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಅಂಕೋಲಾ ತಾಲೂಕಿನ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಈ ಕುರಿತು ಅಂಕೋಲಾ ತಹಶೀಲ್ದಾರ್ ಅವರು ಮಾಹಿತಿ ನೀಡಿದ್ದು, ಪ್ರತಿಕೂಲ ಹವಾಮಾನ ಮತ್ತು ಮಳೆಯ ತೀವ್ರತೆಯನ್ನು ಪರಿಗಣಿಸಿ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಪೋಷಕರು ಹಾಗೂ ಸಾರ್ವಜನಿಕರು ಹವಾಮಾನ ಇಲಾಖೆಯ ಸೂಚನೆಗಳನ್ನು ಪಾಲಿಸಿ, ಅಗತ್ಯವಿಲ್ಲದಿದ್ದರೆ ಹೊರಗಡೆ ಸಂಚರಿಸದಂತೆ ಆಡಳಿತ ಮನವಿ ಮಾಡಿದೆ.

Leave a Reply

Your email address will not be published. Required fields are marked *